ಬೆಂಗಳೂರು: ರಾಜ್ಯದ ಆಡಳಿತರೂಢ ಕಾಂಗ್ರೆಸ್ ಪಕ್ಷ ಮತ್ತು ಪ್ರಮುಖ ಪ್ರತಿ ಪಕ್ಷದ ಬಿಜೆಪಿ ನಡುವೆ ಮತ್ತೊಂದು ಸಂಘರ್ಷ ಆರಂಭವಾಗಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ರಾಜ್ಯ ಸರ್ಕಾರದ ಬಗ್ಗೆ ತಪ್ಪು ಮಾಹಿತಿ, ತಿರುಚುವಿಕೆ ಹಾಗೂ ಸುಳ್ಳು ಸಂಗತಿಗಳನ್ನು ಅಳವಡಿಸಿಕೊಂಡು ದೃಶ್ಯ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಸುಳ್ಳು ಪ್ರಚಾರ ಮಾಡಿದೆ ಎಂದು ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ ‘ರಾಜ್ಯ ಸರ್ಕಾರದ 2 ವರ್ಷಗಳ ವೈಫಲ್ಯ ಬಗ್ಗೆ ಆರೋಪ ಪಟ್ಟಿ’ ಎಂಬ ಶೀರ್ಷಿಕೆಯಡಿ ಬಿಜೆಪಿಯು ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡಿದೆ ಎಂದು ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. ಇದರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ನಿರ್ಧರಿಸಿರುವ ಸರ್ಕಾರ ಈ ಕುರಿತಂತೆ ಅಧಿಸೂಚನೆ ಹೊರಡಿಸಿದೆ.
ಬೆಂಗಳೂರಿನ 42ನೇ ಸಿಎಂಎಂ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಗೆ ಒಳಾಡಳಿತ ಇಲಾಖೆ ಸೂಚನೆ ನೀಡಿದೆ. ಈ ಪ್ರಕರಣವನ್ನು ನಿರ್ವಹಿಸಲು 67ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಸರ್ಕಾರಿ ವಕೀಲ ಬಿ.ಎಸ್. ಪಾಟೀಲ್ ಮತ್ತು ಬೆಂಗಳೂರಿನ 61ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಸರ್ಕಾರಿ ವಕೀಲರಾದ ಶೈಲಜಾ ನಾಯಕ್ ಅವರನ್ನು ನಿಯೋಜಿಸಲಾಗಿದೆ. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಸರ್ಕಾರದ ಯಾವುದೇ ಬೆದರಿಕೆಗೂ ಅಂಜುವ ಪ್ರಶ್ನೆಯೇ ಇಲ್ಲ. ಪೊಲೀಸ್ ಹಾಗೂ ಕಾನೂನಿನ ಹೆಸರಿನಲ್ಲಿ ವಿರೋಧ ಪಕ್ಷಗಳ ಬಾಯಿ ಮುಚ್ಚಿಸಬಹುದು ಎಂದು ನೀವು ಭಾವಿಸಿದ್ದರೆ ಅದು ನಿಮ್ಮ ಮೂರ್ಖತನದ ಪರಮಾವಧಿಯಲ್ಲದೇ ಬೇರೆನೂ ಅಲ್ಲ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸರ್ಕಾರದ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯ ಕತ್ತು ಹಿಸುಕಲು ಭಾರತದದಲ್ಲಿ ತುರ್ತು ಪರಿಸ್ಥಿತಿ ಹೇರಿದ ಕರಾಳ ಇತಿಹಾಸ ಕಾಂಗ್ರೆಸ್ ಪಕ್ಷದ್ದು ಎಂದು ಟೀಕಿಸಿರುವ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹೇಳಿಕೆ ಪೋಸ್ಟ್ ಮಾಡಿದ್ದಾರೆ.
ನಿಮ್ಮ ಸರ್ವಾಧಿಕಾರಿ ಮನಃಸ್ಥಿತಿಗೆ ಭಟ್ಟಂಗಿಗಳ ಹಾಗೂ ಅವಿವೇಕಿಗಳ ಸಲಹೆಯನ್ನು ಆಧರಿಸಿ, ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿರುವುದು ಕೇವಲ ಭಾರತೀಯ ಜನತಾ ಪಾರ್ಟಿ ವಿರುದ್ಧವಷ್ಟೇ ಅಲ್ಲ, ಮಾಧ್ಯಮಗಳ ವಿರುದ್ಧವೂ ಸೇಡು ತೀರಿಸಿಕೊಳ್ಳಲು ಹೊರಟಿರುವುದು ಸ್ಪಷ್ಟವಾಗಿದೆ ಎಂದಿದ್ದಾರೆ.
ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿಯ 2ನೇ ಅಧ್ಯಾಯ ಆರಂಭವಾಗಿದೆ. ಅದನ್ನು ಹಿಮ್ಮೆಟ್ಟಿಸುವ ಶಕ್ತಿ ಪ್ರಜಾಪ್ರಭುತ್ವಕ್ಕಿದೆ. ಕರ್ನಾಟಕದ ಜನರಿಗಿದೆ, ವಿರೋಧ ಪಕ್ಷಗಳಿಗಿದೆ .ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿರುವ ವಿರೋಧ ಪಕ್ಷವನ್ನು ದಮನ ಮಾಡಲು ವಿರೋಧಿ ರಾಜಕೀಯ ನೇತಾರರು ಹಾಗೂ ಪ್ರಮುಖರನ್ನು ಜೈಲಿಗೆ ತಳ್ಳಿದ ಕುಖ್ಯಾತಿ ಕಾಂಗ್ರೆಸ್ ಪಕ್ಷದ್ದು ಎಂದು ಟೀಕಿಸಿದ್ದಾರೆ.
ತುರ್ತು ಪರಿಸ್ಥಿತಿ ಹೆಸರಿನಲ್ಲಿ ಮಾಧ್ಯಮ ಕಚೇರಿಗಳಿಗೆ ಬೀಗ ಜಡಿದು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕಿ, ಸಂವಿಧಾನದ ಆಶಯದ ಮೇಲೆ ಅಟ್ಟಹಾಸ ಮೆರೆದ ಇತಿಹಾಸ ಕಾಂಗ್ರೆಸ್ ಪಕ್ಷದ್ದು ಎಂದಿದ್ದಾರೆ.
ಅಧಿಕಾರಕ್ಕೆ ಬಂದಾಗಲೆಲ್ಲಾ ಪಾಳೆಗಾರಿಕೆ ಗುಂಗಿನಲ್ಲಿ ವರ್ತಿಸುವ ಕಾಂಗ್ರೆಸ್ಸಿಗರು ಕರ್ನಾಟಕದಲ್ಲಿ ಕಳೆದ 2 ವರ್ಷಗಳಲ್ಲಿ ನಿರಂಕುಶ ಪ್ರಭುತ್ವ ಸಾಧಿಸಲು ಹವಣಿಸುತ್ತಿದ್ದಾರೆ ಎಂದು ದೂರಿದ್ದಾರೆ.
ಸರಣಿ ಭ್ರಷ್ಟಾಚಾರಗಳು, ಅಭಿವೃದ್ಧಿ ಶೂನ್ಯ ಆಡಳಿತವನ್ನು ಪ್ರಶ್ನಿಸಿ ಹೋರಾಡುತ್ತಿರುವ ವಿರೋಧ ಪಕ್ಷಗಳನ್ನು ಈವರೆವಿಗೂ ಪೊಲೀಸ್ ವ್ಯವಸ್ಥೆ ದುರ್ಬಳಕೆ ಮಾಡಿಕೊಂಡು ಬೆದರಿಸುತ್ತಿದ್ದ ಕಾಂಗ್ರೆಸ್, ವಿಧಾನಸಭೆಯ ಅಧ್ಯಕ್ಷರನ್ನು ಬಳಸಿಕೊಂಡು ವಿರೋಧ ಪಕ್ಷದ 18 ಸದಸ್ಯರನ್ನು ಸುದೀರ್ಘ ಅವಧಿಗೆ ಅಮಾನತ್ತು ಮಾಡಿ ಸಭಾಧ್ಯಕ್ಷ ಪೀಠವನ್ನು ತನ್ನ ಸರ್ವಾಧಿಕಾರತನ ಪ್ರದರ್ಶಿಸಲು ಬಳಸಿಕೊಂಡಿತ್ತು ಎಂದಿದ್ದಾರೆ.
ಇದೀಗ ಸಾಧನೆಯ ಹೆಸರಿನಲ್ಲಿ ರಾಜ್ಯದ ಜನರಿಗೆ ಸುಳ್ಳು ಹೇಳಲು ಹೊರಟು ಬರಿದಾಗಿರುವ ಬೊಕ್ಕಸವನ್ನು ಮತ್ತಷ್ಟು ಬರಿದು ಮಾಡಲು ದುಂದುವೆಚ್ಚದಲ್ಲಿ ‘ಸಾಧನ ಸಮಾವೇಶ’ ಮಾಡಲು ಹೊರಟ ಜನವಿರೋಧಿ ನಡೆಯನ್ನು ಪ್ರಶ್ನಿಸಿ ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಭಾರತೀಯ ಜನತಾ ಪಾರ್ಟಿ ಮಾಧ್ಯಮಗಳ ಮೂಲಕ ಜಾಹಿರಾತು ಬಿಡುಗಡೆ ಮಾಡಿದರೆ ಅದರಿಂದ ವಿಚಲಿತಗೊಂಡು ಮಾನನಷ್ಟ ಮೊಕದ್ದಮೆ ಹೂಡಲು ಹೊರಟಿದೆ ಎಂದಿದ್ದಾರೆ.
ಇದಕ್ಕೆ ಸರ್ಕಾರದ ವ್ಯವಸ್ಥೆ ಹಾಗೂ ಅಧಿಕಾರಿಗಳನ್ನು ನಿಯೋಜಿಸುವ ಮೂಲಕ ಇದೇ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ವಿರೋಧ ಪಕ್ಷ ಹಾಗೂ ಮಾಧ್ಯಮದವರನ್ನು ಬೆದರಿಸುವ ಕರಾಳ ಅಧಿಸೂಚನೆ ಹೊರಡಿಸಿದೆ. ಕೇವಲ ಜಾಹಿರಾತಿಗೆ ಇಷ್ಟೊಂದು ಹೆದರಿರುವ ಕಾಂಗ್ರೆಸ್ ಸರ್ಕಾರದ ನಡೆ ಪಲಾಯನವಾದ ಹಾಗೂ ʼಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡಂತೆʼ ಎಂಬುದನ್ನು ಪ್ರತಿಬಿಂಬಿಸುತ್ತಿದೆ ಎಂದಿದ್ದಾರೆ.




