ಬೆಳಗಾವಿ: ರಾಜ್ಯದ ನೇಕಾರ ಸಮುದಾಯಕ್ಕೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕಳೆದ ಬಜೆಟ್ ನಲ್ಲಿ ಪ್ರಕಟಿಸಿರುವ ಉಚಿತ ವಿದ್ಯುತ್ ಯೋಜನೆಯನ್ನು ಅನುಷ್ಠಾನಕ್ಕೆ ತರಲು ಮುಂದಾಗಿದೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಶಶಿಕಲಾ ಜೊಲ್ಲೆ ಅವರ ಪ್ರಶ್ನೆಗೆ ಉತ್ತರಿಸಿದ ಸಕ್ಕರೆ ಮತ್ತು ಜವಳಿ ಸಚಿವ ಶಿವಾನಂದ ಪಾಟೀಲ್, ವಿದ್ಯುತ್ ಮಗ್ಗಗಳಿಗೆ ಹತ್ತು ಅಶ್ವಶಕ್ತಿವರೆಗೆ ನವೆಂಬರ್ 2023ರಿಂದ ಜಾರಿ ಮಾಡಿರುವ ಉಚಿತ ವಿದ್ಯುತ್ ಪೂರೈಕೆ ಯೋಜನೆಯನ್ನು ಏಪ್ರಿಲ್‌ನಿಂದ ಅನ್ವಯಗೊಳಿಸುವ ನೇಕಾರರ ಬೇಡಿಕೆಯನ್ನು ಪರಿಗಣಿಸಲಿದ್ದು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.
ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಹತ್ತು ಅಶ್ವಶಕ್ತಿವರೆಗಿನ ವಿದ್ಯುತ್ ಮಗ್ಗಗಳಿಗೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಈ ಆದೇಶ ನವಂಬರ್‌ನಿಂದ ಜಾರಿಗೆ ಬಂದಿದ್ದು, ಅಂದಿನಿಂದ ಅನ್ವಯವಾಗುತ್ತಿದೆ. ಉಚಿತ ವಿದ್ಯುತ್ ಪೂರೈಕೆ ಯೋಜನೆಯಿಂದ ವಾರ್ಷೀಕ 120 ರಿಂದ 130 ಕೋಟಿ ರೂ. ವೆಚ್ಚವಾಗುತ್ತಿದೆ ಎಂದು ವಿವರಿಸಿದರು.
ಸರ್ಕಾರದ ಆದೇಶ ಹೊರಬಿದ್ದ ದಿನದಿಂದ ಉಚಿತ ವಿದ್ಯುತ್ ಪೂರೈಕೆ ಅನ್ವಯವಾಗುತ್ತಿದೆ. ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದಲೇ ಅನ್ವಯ ಮಾಡಬೇಕು ಎಂಬ ಬೇಡಿಕೆಗೆ ಆರ್ಥಿಕ ಇಲಾಖೆ ಅನುಮತಿ ಅಗತ್ಯವಿದೆ. ಹೀಗಾಗಿ ಬೇಡಿಕೆ ಪರಿಗಣಿಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ ಎಂದರು.
ಹತ್ತು ಅಶ್ವಶಕ್ತಿವರೆಗಿನ ವಿದ್ಯುತ್ ಮಗ್ಗಗಳಿಗೆ ಉಚಿತ ವಿದ್ಯುತ್ ಪೂರೈಕೆ ಮಾಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿತ್ತು.ನಂತರ ಬೇಡಿಕೆ ಹಿನ್ನೆಲೆಯಲ್ಲಿ ಹತ್ತರಿಂದ ಇಪ್ಪತ್ತು ಅಶ್ವಶಕ್ತಿವರೆಗೆ ಪ್ರತಿ ಯೂನಿಟ್‌ಗೆ ರಿಯಾಯಿತಿ ದರ 1.25 ರೂ. ಘೋಷಣೆ ಮಾಡಲಾಯಿತು ಎಂದರು.
ಅನೇಕ ನೇಕಾರರು ಉಚಿತ ವಿದ್ಯುತ್ ಯೋಜನೆ ಜಾರಿಗೆ ಬರುವವರೆಗೆ ವಿದ್ಯುತ್ ಬಿಲ್ ಪಾವತಿ ಮಾಡಿದ್ದಾರೆ. ಕೆಲವರು ಮಾತ್ರ ಬಾಕಿ ಉಳಿಸಿಕೊಂಡಿದ್ದಾರೆ. ಯಾವುದೇ ಯೋಜನೆ ಸರ್ಕಾರದ ಆದೇಶ ಹೊರಬಿದ್ದ ನಂತರವೇ ಅನ್ವಯವಾಗಲಿದೆ. ಆದರೂ ಆದೇಶ ಹೊರ ಬೀಳುವ ಮುಂಚಿನ ಅವಧಿಗೂ ಅನ್ವಯ ಮಾಡಬೇಕು ಎಂಬ ಬೇಡಿಕೆಗೆ ಸರ್ಕಾರ ಸಕಾರಾತ್ಮವಾಗಿ ಸ್ಪಂದಿಸುತ್ತಿದೆ ಎಂದರು.




