ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣ ಸಮೀಪ ನಡೆದ ಕಾಲ್ತುಳಿತ ಪ್ರಕರಣದ ಕುರಿತು ಹಲವು ಆಯಾಮಗಳ ಮೂಲಕ ತನಿಖೆ ನಡೆಸಲಾಗುತ್ತಿದೆ. ಆದರೆ, ಇದಕ್ಕೂ ಮುನ್ನವೇ ರಾಜ್ಯ ಸರ್ಕಾರ ಕಾಲ್ತುಳಿತ ಘಟನೆಗೆ ಕಾರಣ ಯಾರು ಎಂಬುದನ್ನು ಪತ್ತೆ ಹಚ್ಚಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಹನ್ನೊಂದು ಜನರನ್ನು ಬಲಿತೆಗೆದುಕೊಂಡು ಹಲವು ನಾಗರಿಕರು ಗಾಯಗೊಳ್ಳಲು ಕಾರಣವಾದ ಈ ಕಾಲ್ತುಳಿತ ಪ್ರಕರಣಕ್ಕೆ ಮೂವರು ಐಪಿಎಸ್ ಅಧಿಕಾರಿಗಳು ಕಾರಣ ಎಂದು ಹೇಳಿದೆ.
ಕಾಲ್ತುಳಿತ ದುರಂತದ ಸಂಬಂಧ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ವರದಿ ನೀಡಿದೆ. ಇದರಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ದಯಾನಂದ ಸೇರಿದಂತೆ ಇತರ ಐಪಿಎಸ್ ಅಧಿಕಾರಿಗಳ ಅಮಾನತ್ತಿಗೆ ಕಾರಣದ ಸಂಪೂರ್ಣ ವಿವರಣೆ ಕೂಡ ವರದಿಯಲ್ಲಿದೆ. ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಕಾಲ್ತುಳಿತಕ್ಕೆ ಮೂವರು ಐಪಿಎಸ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಉಲ್ಲೇಖಿಸಲಾಗಿದೆ.
ಮೂವರು ಐಪಿಎಸ್ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಸರ್ಕಾರ ವರದಿ ನೀಡಿದೆ. ಇದೇ ಕಾರಣಕ್ಕೆ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ ಎಂದು ವರದಿಯಲ್ಲಿ ತಿಳಿಸಿದೆ.
ಆಡಳಿತ ಸುಧಾರಣ ಇಲಾಖೆ ಮೂಲಕ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಕೆ ಆಗಿದ್ದು, ಕಾಲ್ತುಳಿತದಲ್ಲಿ 11 ಮಂದಿಯ ಸಾವಿಗೆ ಪೊಲೀಸ್ ಭದ್ರತಾ ವೈಪಲ್ಯ ಕಾರಣವಾಗಿದೆ. ಭದ್ರತೆ ಜೊತೆ ಅಧಿಕಾರಿಗಳ ಮಧ್ಯೆ ಸಂವಹನದ ಕೊರತೆ ಎದ್ದು ಕಂಡಿದೆ ಉಲ್ಲೇಖ ಮಾಡಿದ್ದಾರೆ.
ಇಂತಹ ಹತ್ತು ಹಲವು ಕಾರಣದಿಂದಾಗಿ ಈ ಅಧಿಕಾರಿಗಳ ಅಮಾನತು ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿ ಮೂವರು ಐಪಿಎಸ್ ಗಳ ಅಮಾನತು ಮಾಡಲಾಗಿದೆ ಎಂದು ತಿಳಿಸಿದೆ.
ವರದಿಯ ಪ್ರಮುಖ ಅಂಶಗಳು:
ಭದ್ರತಾ ವೈಪಲ್ಯ ಹಾಗೂ ಸಂವಹನದ ಕೊರತೆ
ವಿಜಯೋತ್ಸವದ ಬಗ್ಗೆ ಮಾಹಿತಿ ಇದ್ದರೂ ಭದ್ರತೆ ಕಲ್ಪಿಸಿಲ್ಲ
ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಘಟನೆ ನಡೆದಿದೆ
ಎಷ್ಟು ಜನ ಸೇರುತ್ತಾರೆ ಎಂದು ಅಂದಾಜಿಸಿಲ್ಲ
ಗುಪ್ತದಳದ ವೈಫಲ್ಯ
ಭದ್ರತೆಗೆ ಬೇಕಾದಷ್ಟು ಸಿಬ್ಬಂದಿ ನಿಯೋಜನೆ ಮಾಡಿಲ್ಲ
ಮುಖ್ಯಮಂತ್ರಿಗಳಿಗೆ ಘಟನೆ ಬಗ್ಗೆ ತಡವಾಗಿ ಮಾಹಿತಿ ನೀಡಲಾಗಿದೆ
ಸ್ಟೇಡಿಯಂ ಬಳಿ ಹೆಚ್ಚಿನ ಪೊಲೀಸರು ಭದ್ರತೆಗೆ ಇರಲಿಲ್ಲ
ಇತಿಹಾಸದಲ್ಲೇ ಇದು ಬಹು ದೊಡ್ಡ ದುರಂತವಾಗಿದೆ




