ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ಸಮರಕ್ಕೆ ರಾಜ್ಯ ಸರ್ಕಾರ ಸಜ್ಜಾಗುತ್ತಿದೆ. ಈ ಬಾರಿ ದಕ್ಷಿಣದ ರಾಜ್ಯಗಳ ನೇತೃತ್ವದೊಂದಿಗೆ ಕೇಂದ್ರದ ವಿರುದ್ಧ ಸಂಘರ್ಷಕ್ಕೆ ಮುನ್ನುಡಿ ಇಡಲು ಚಿಂತನೆ ನಡೆದಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಪರಿಹಾರಾತ್ಮಕ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ರಾಜ್ಯಗಳಿಂದ ಸಂಗ್ರಹವಾದ ಹಣವನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ರಾಜ್ಯ ಅರಣ್ಯ ಮಂತ್ರಿ ಈಶ್ವರ ಖಂಡ್ರೆ ಆಪಾದಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಯುತವಾಗಿ ರಾಜ್ಯಗಳಿಗೆ ಬಿಡುಗಡೆಯಾಗಬೇಕಾಗಿರುವ ಈ ಹಣವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಒತ್ತಾಯಿಸಲು ದಕ್ಷಿಣ ರಾಜ್ಯಗಳ ಅರಣ್ಯ ಸಚಿವರ ನಿಯೋಗವನ್ನು ಕೇಂದ್ರಕ್ಕೆ ತೆಗೆದುಕೊಂಡು ಹೋಗುವುದಾಗಿ ಹೇಳಿದ್ದಾರೆ.
ವನ್ಯಜೀವಿಗಳು ಕಾಡಿನಿಂದ ಹೊರಬರುತ್ತಿದ್ದು, ಅವು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗುತ್ತಿವೆ, ಮಾನವ -ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟುವ ದೃಷ್ಟಿಯಿಂದ ರೈಲ್ವೆ ಬ್ಯಾರಿಕೇಡ್ ಅಳವಡಿಸಲು, ಕಾರಿಡಾರ್ ನಿರ್ಮಿಸಲು ಕ್ಯಾಂಪಾದಲ್ಲಿರುವ ರಾಜ್ಯದ 1400 ಕೋಟಿ ರೂ. ಹಣವನ್ನೇ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದರು.
ಈ ಹಣವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಆಗ್ರಹಿಸಲು ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವರ ಬಳಿಗೆ ದಕ್ಷಿಣ ರಾಜ್ಯಗಳ ಅರಣ್ಯ ಸಚಿವರ ನಿಯೋಗ ತೆಗೆದುಕೊಂಡು ಹೋಗುವ ಬಗ್ಗೆ ಚರ್ಚಿಸಿದ್ದು, ಶೀಘ್ರವೇ ಎಲ್ಲ ಸಚಿವರಿಗೂ ಪತ್ರ ಬರೆಯಲಾಗುವುದು ಎಂದರು.
ಆಗಸ್ಟ್ 12ರಂದು ಬೆಂಗಳೂರಿನಲ್ಲಿ ನಡೆದ ಮಾನವ-ಆನೆ ಸಂಘರ್ಷ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ಸಂದರ್ಭದಲ್ಲಿ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಜಾರ್ಖಂಡ್ ರಾಜ್ಯದ ಸಚಿವರು ಕೂಡ ಕೇಂದ್ರಕ್ಕೆ ನಿಯೋಗದಲ್ಲಿ ಆಗಮಿಸಲು ಸಮ್ಮಿತಿಸಿದ್ದರು ಎಂದರು.
ಆನೆಗಳಿಂದ ಬೆಳೆಹಾನಿ ಮತ್ತು ಜೀವಹಾನಿ ಆಗುತ್ತಿದ್ದು, ಇದನ್ನು ತಪ್ಪಿಸಲು ಭದ್ರಾ ಅಭಯಾರಣ್ಯದಲ್ಲಿ ಆನೆಗಳ ವಿಹಾರಧಾಮ (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್) ನಿರ್ಮಿಸಲು ಯೋಜನೆ ರೂಪಿಸಲಾಗತ್ತಿದೆ. ಇದಕ್ಕೆ 100 ಕೋಟಿ ರೂ. ಅಗತ್ಯವಿದ್ದು, ಬಜೆಟ್ ನಲ್ಲಿ ಅನುದಾನ ನೀಡುವಂತೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದರು.
ರಾಜ್ಯದ ರಾಷ್ಟ್ರೀಯ ಉದ್ಯಾನ, ವನ್ಯಜೀವಿ ಅಭಯಾರಣ್ಯ, ಮೀಸಲು ಅರಣ್ಯ, ಹುಲಿ ಸಂರಕ್ಷಿತ ಅರಣ್ಯ ಸೇರಿದಂತೆ ವಿವಿಧ ಅರಣ್ಯಗಳಲ್ಲಿ ಹಲವಾರು ವರ್ಷಗಳಿಂದ ಅರಣ್ಯವಾಸಿಗಳು ಜೀವಿಸುತ್ತಿದ್ದು, ಗಂಡ, ಹೆಂಡತಿ ಒಳಗೊಂಡು ಪ್ರತಿ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಿ ಹಂತ ಹಂತವಾಗಿ ಸ್ಥಳಾಂತರಿಸಲಾಗುವುದು ಎಂದರು.




