ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರ ಅತ್ಯಂತ ಸುಭದ್ರವಾಗಿದ್ದು, ಹಲವಾರು ಕಾರ್ಯಕ್ರಮಗಳ ಮೂಲಕ ಜನರ ವಿಶ್ವಾಸ ಗಳಿಸಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಯೇ ಇಲ್ಲ. ಒಂದು ವೇಳೆ ಸಂಪುಟ ಪುನಾರಚನೆ ಅಥವಾ ಯಾವುದೇ ಪ್ರಮುಖ ರಾಜಕೀಯ ನಿರ್ಧಾರ ಕೈಗೊಳ್ಳುವುದಿದ್ದರೂ, ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಹೈಕಮಾಂಡ್ ಸೇರಿ ತೀರ್ಮಾನಿಸುತ್ತದೆ ಎಂದರು.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಒಟ್ಟಾಗಿ ಚರ್ಚಿಸಿ ಅಂತಿಮ ನಿರ್ಧಾರಕ್ಕೆ ಬರುತ್ತಾರೆ. ಎಲ್ಲಕ್ಕಿಂತ ಹೆಚ್ಚಾಗಿ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ನಿರ್ಣಯವೇ ಅಂತಿಮವಾಗಿರುತ್ತದೆ ಎಂದರು.
ಪಕ್ಷದಲ್ಲಿ ಸಮುದಾಯವಾರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವ ಬೇಡಿಕೆಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಅದೆಲ್ಲವೂ ಹೈಕಮಾಂಡ್ ಮಟ್ಟದಲ್ಲಿ ತೀರ್ಮಾನವಾಗುವ ವಿಚಾರಗಳು ಎಂದರು.




