ಲಾಕ್ ಡೌನ್ ಸಂಕಷ್ಟ: ವಿಶೇಷ ಪ್ಯಾಕೇಜ್ ಗೆ ಒತ್ತಾಯಿಸಿದ ಸುಪ್ರೀತಾ ಒಡೆಯರ್

5 years ago

ಸಿಂದಗಿ: ಕರ್ನಾಟಕ ರಾಜ್ಯದಲ್ಲಿ ಕೋವಿಡ್ 19 ರ ವ್ಯಾಪಕ ಹರಡುವಿಕೆಯನ್ನು ತಡೆಯುವ ಹಿನ್ನೆಲೆಯಲ್ಲಿ ಸರಕಾರ ಲಾಕ್ ಡೌನ್ ಘೋಷಿಸಿ 20ಕ್ಕೂ ಹೆಚ್ಚು ದಿನಗಳು ಕಳೆದಿವೆ. ಲಾಕ್ ಡೌನ್ ಸದ್ಯ ಮುಂದುವರೆದಿದೆ. ಇದರಿಂದ ಪ್ರತಿದಿನ ದುಡಿದು ತಿನ್ನುವ ಕೂಲಿ ಕಾರ್ಮಿಕ ವರ್ಗ ತುಂಬಾ ಸಂಕಷ್ಟಕ್ಕೆ ಸಿಲುಕಿದೆ. ಕೂಡಲೇ ಸರಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಮಹಿಳಾ ಬ್ಲಾಕ್ ಕಾಂಗ್ರೆಸ್ ಸಮಿತಿ ಆಲಮೇಲ ಅಧ್ಯಕ್ಷೆ ಸುಪ್ರೀತಾ ಕೆ ಒಡೆಯರ್ ಒತ್ತಾಯಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೈಗೊಂಡ ನಿರ್ಧಾರದಿಂದಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರಿಂದ ಜೀವನ ನಡೆಸುವುದೇ ಕಷ್ಟವಾಗಿದೆ. ಸದ್ಯ ಲಾಕ್ ಡೌನ್ ನಿಂದಂತೂ ತೀರಾ ಕಷ್ಟಕ್ಕೊಳಗಾಗಿರುವ ದುಡಿಯುವ ವರ್ಗಕ್ಕೆ ವಿಶೇಷ ಪರಿಹಾರ ಪ್ಯಾಕೇಜ್ ನೀಡಿದರೆ ಸ್ವಲ್ಪ ಮಟ್ಟಿಗೆ ಅವರು ನಿಟ್ಟುಸಿರು ಬಿಡಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಜೊತೆಗೆ ಸರಕಾರ ಕೂಡಲೇ ಆಟೋ, ಟ್ಯಾಕ್ಸಿ, ಲಾರಿ ಚಾಲಕರು ಹಾಗೂ ಕಟ್ಟಡ ಕಾರ್ಮಿಕರು ಸೇರಿದಂತೆ ಇತರೆ ಅನೇಕ ಅಸಂಘಟಿತ ಕಾರ್ಮಿಕರಿಗೆ  ಆಂದ್ರಪ್ರದೇಶ, ಕೇರಳ, ದೆಹಲಿಯಲ್ಲಿ ಘೋಷಣೆ ಮಾಡಿದ ಮಾದರಿಯಲ್ಲಿ ವಿಶೇಷ ಪ್ಯಾಕೇಜ್ ಅನ್ನು ರಾಜ್ಯದಲ್ಲಿ ಕೂಡಲೇ ರಾಜ್ಯ ಸರ್ಕಾರ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Leave a Reply