ಬೆಂಗಳೂರು: ಮನುಷ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಇಡ್ಲಿ ತಯಾರಿಕೆಗೆ ಬಳಸುತ್ತಿರುವ ಪ್ಲಾಸ್ಟಿಕ್ ನಿಷೇಧ ಆದೇಶ ಜಾರಿಗೊಳಿಸಿರುವ ರಾಜ್ಯ ಸರ್ಕಾರ ಇದೀಗ ಟ್ಯಾಟೂ ಇಂಕ್ ನಿಷೇಧಕ್ಕೆ ಮುಂದಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಮನುಷ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಖಾದ್ಯ ವಸ್ತುಗಳ ತಯಾರಿಕೆಗೆ ಬಳಸುವ ರಾಸಾಯನಿಕಗಳು ಕಾಂತಿ ವರ್ಧಕ ಸಾಮಾಗ್ರಿಗಳ ಬಳಕೆ ಕುರಿತಂತೆ ಆರೋಗ್ಯ ಇಲಾಖೆ ಪರಿಶೀಲನೆ ನಡೆಸಿದೆ.
ಈ ವೇಳೆ ಟ್ಯಾಟೂ ಹಾಕಲು ಬಳಸಲಾಗುತ್ತಿರುವ ಇಂಕ್ ಚರ್ಮರೋಗಕ್ಕೆ ಕಾರಣವಾಗುತ್ತಿದೆ ಎಂಬ ವರದಿಗಳು ಬಂದಿದ್ದು ಅದನ್ನು ನಿಷೇಧಿಸುವ ಕುರಿತಂತೆ ಪರಿಶೀಲನೆ ನಡೆದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟ್ಯಾಟೂ ಇಂಕ್‌ಗೆ ಸಂಬಂಧಿಸಿದಂತೆ ಯಾವುದೇ ಗುಣಮಟ್ಟ ಇರುವುದಿಲ್ಲ ಹಾಗೂ ಔಷಧ ಮತ್ತು ಕಾಂತಿವರ್ಧಕ ಅಧಿನಿಯಮಗಳ ವ್ಯಾಪ್ತಿಗೆ ಒಳಪಟ್ಟಿಲ್ಲ. ಈ ಟ್ಯಾಟೂ ಇಂಕ್ನಲ್ಲಿ ಇರುವ ರಾಸಾಯನಿಕ ಮತ್ತು ಇತರೆ ಅಂಶಗಳು ಚರ್ಮದ ಮೂಲಕ ದೇಹವನ್ನು ಪ್ರವೇಶಿಸುತ್ತದೆ. ಇದರಿಂದ ಅನೇಕ ಚರ್ಮ ರೋಗಗಳು ಉಲ್ಬಣಗೊಳ್ಳುವ ಸಾಧ್ಯತೆಗಳಿವೆ. ಈ ಕುರಿತಂತೆ ನಿಯಮಗಳನ್ನು ರೂಪಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆ. ಟ್ಯಾಟೂ ಇಂಕ್ ಅನ್ನು ಕಾಂತಿವರ್ಧಕಗಳ ಅಡಿಯಲ್ಲಿ ತರಲು ಹಾಗೂ ಬಿಐಎಸ್ ಪ್ರಕಾರ ಮಾನದಂಡಗಳನ್ನು ರೂಪಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.
ರಾಜ್ಯದಲ್ಲಿ ಜನವರಿಯಿಂದ ಒಟ್ಟು 3608 ಆಹಾರ ಪದಾರ್ಥಗಳ ಮಾದರಿ ಸಂಗ್ರಹಿಸಲಾಗಿದೆ. ಈ ಪೈಕಿ 26 ಮಾದರಿಗಳು ಅಸುರಕ್ಷಿತವಾಗಿವೆ ಎಂಬುದು ತಿಳಿದುಬಂದಿದೆ. 28 ಕಳಪೆಯಾಗಿವೆ. ಜನವರಿಯಲ್ಲಿ 681 ರಷ್ಟು ಇಡ್ಲಿ ಸ್ಯಾಂಪಲ್ಸ್ ಪಡೆಯಲಾಗಿದೆ. ಇಡ್ಲಿ ಮಾಡುವಾಗ ಪ್ಲಾಸಿಕ್ ಬಳಸುತ್ತಿರುವುದು ಗಮನಕ್ಕೆ ಬಂದಿದೆ. ಘಟನೆ ಸಂಬಂಧ 52 ಆಹಾರ ಉತ್ಪಾದಕರಿಗೆ ನೋಟಿಸ್ ನೀಡಲಾಗಿದೆ. ಪ್ಲಾಸ್ಟಿಕ್ ಬಳಕೆ ಮಾಡದಂತೆ ಈಗಾಗಲೇ ನಾವು ಎಚ್ಚರಿಕೆ ನೀಡಿದ್ದೇವೆ ಎಂದರು.
ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯಲ್ಲಿ ಔಷಧ ಆಡಳಿತವು ರಾಜ್ಯದಲ್ಲಿ ತಯಾರಾಗುವ ಮತ್ತು ಮಾರಾಟಕ್ಕಾಗಿ ಸರಬರಾಜಾಗುತ್ತಿರುವ ಔಷಧಗಳ ಮತ್ತು ಕಾಂತಿವರ್ಧಕ ಮೇಲೆ ನಿಯಮಾನುಸಾರ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದು ಮತ್ತು ಉತ್ತಮ ಗುಣಮಟ್ಟದ, ಸುರಕ್ಷಿತ ಹಾಗೂ ಪರಿಣಾಮಕಾರಿ ಔಷಧಗಳನ್ನು ನಿಯಂತ್ರಿತ ಬೆಲೆಗಳಲ್ಲಿ ಗ್ರಾಹಕರಿಗೆ ದೊರಕುವಂತೆ ಮಾಡುವುದೇ ಇಲಾಖೆಯ ಮುಖ್ಯ ಉದ್ದೇಶವಾಗಿರುತ್ತದೆ. ಅಂತೆಯೇ ಇಲಾಖೆಯ ಆಹಾರ ಸುರಕ್ಷತಾ ವಿಭಾಗವು ಸಾರ್ವಜನಿಕರು ಸೇವಿಸುವ ಆಹಾರದ ಗುಣಮಟ್ಟ ಮತ್ತು ಸುರಕ್ಷತಾ ಅಂಶಗಳನ್ನು ಖಾತರಿಪಡಿಸುವ ಮತ್ತು ಆ ಮೂಲಕ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ.” ಎಂದರು.
2024ರ ಡಿಸೆಂಬರ್ನಲ್ಲಿ ಕಾಂತಿವರ್ಧಕಗಳ ಗುಣಮಟ್ಟವನ್ನು ಪರೀಕ್ಷಿಸಲು ಇಂದಿನವರೆಗೆ 262 ಕಾಂತಿವರ್ಧಕ ಮಾದರಿಗಳನ್ನು ವಿಶ್ಲೇಷಣೆಗೆ ಪಡೆಯಲಾಗಿದೆ. ಅವುಗಳಲ್ಲಿ 120 ಉತ್ತಮ ಗುಣಮಟ್ಟದ ಕಾಂತಿವರ್ಧಕಗಳೆಂದು ಘೋಷಿತವಾಗಿದೆ. ಉಳಿದ ಮಾದರಿಗಳು ವಿಶ್ಲೇಷಣಾ ಹಂತದಲ್ಲಿರುತ್ತದೆ. ಡಿಸೆಂಬರ್ 2024 ಹಾಗೂಜನವರಿ 2025ರ ಮಾಹೆಗಳಲ್ಲಿ ಔಷಧ ಮತ್ತು ಕಾಂತಿವರ್ಧಕ ಅಧಿನಿಯಮದ 1940 ಮತ್ತು ಅದರಡಿಯ ನಿಯಾಮಾವಳಿಗಳನ್ನು ಉಲ್ಲಂಘನೆ ಮಾಡಿದ 75 ಸಂಸ್ಥೆಗಳ ವಿರುದ್ಧ ನ್ಯಾಯಾಲಯಗಳಲ್ಲಿ ಮೊಕದ್ದಮೆಯನ್ನು ದಾಖಲಿಸಲು ಅನುಮತಿ ನೀಡಲಾಗಿದೆ ಎಂದರು.
ರಾಜ್ಯಾದ್ಯಂತ ಎಲ್ಲಾ ಔಷಧ ಮಳಿಗೆಗಳಲ್ಲಿ ಆಂಟಿಬಯೋಟಿಕ್ ಔಷಧಗಳ ದುರ್ಬಳಕೆ ಬಗ್ಗೆ ಅಮಲು ಜಾರಿ ಅಧಿಕಾರಿಗಳು ವಿಶೇಷ ತಪಾಸಣೆ ಕೈಗೊಂಡು 199 ಪರಿವೀಕ್ಷಣೆಗಳನ್ನು ನಡೆಸಲಾಗಿದೆ. 52 ಔಷಧ ಮಳಿಗೆಗಳಲ್ಲಿ ಆಂಟಿಬಯೋಟಿಕ್ ಔಷಧಗಳನ್ನು ಮಾರಾಟ ಮಾಡಿರುವುದು ಕಂಡುಬಂದಿರುತ್ತದೆ. ಈ 52 ಪ್ರಕರಣಗಳಲ್ಲಿ ಮೊಕದ್ದಮ ಹೂಡಲು ತನಿಖೆ ಪ್ರಗತಿಯಲ್ಲಿರುತ್ತದೆ ಎಂದರು.




