ಬೆಂಗಳೂರು: ರಾಜ್ಯದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
- ಅಲೆಮಾರಿಗಳು ಇನ್ನೂ ಅತ್ಯಂತ ಹೀನಾಯ ಸ್ಥಿತಿಗೆ ತಲುಪುವ ಸಾಧ್ಯತೆ: ವಡ್ಡಗೆರೆ ನಾಗರಾಜಯ್ಯ
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
ಗುಪ್ತಚರ ವಿಭಾಗದ ಎಡಿಜಿಪಿಯಾಗಿದ್ದ ಕೆ.ವಿ.ಶರತ್ಚಂದ್ರ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ ಮತ್ತು ಹೆಚ್ಚುವರಿಯಾಗಿ ಸಂಚಾರ ಹಾಗೂ ರಸ್ತೆ ಸುರಕ್ಷತಾ ಮುಖ್ಯಸ್ಥರಾಗಿಯೂ ಜವಾಬ್ದಾರಿ ನೀಡಲಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದ ಹೇಮಂತ್ ಎಂ.ನಿಂಬಾಳ್ಕರ್ ಅವರನ್ನು ರಾಜ್ಯ ಪೊಲೀಸ್ ಗುಪ್ತಚರ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಇದರ ಜತೆಗೆ ವಾರ್ತಾ ಇಲಾಖೆಯ ಆಯುಕ್ತರ ಜವಾಬ್ದಾರಿಯನ್ನೂ ಕೂಡ ಹೆಚ್ಚುವರಿಯಾಗಿ ನೀಡಲಾಗಿದೆ. ಎಡಿಜಿಪಿ ಅಲೋಕ್ಕುಮಾರ್ ಅವರನ್ನು ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದಿಂದ ಬಿಡುಗಡೆ ಮಾಡಲಾಗಿದೆ.



