ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಜನರಿಗೆ ಅನುಕೂಲವಾಗಿದೆ. ಸರ್ಕಾರ ಕಟ್ಟ ಕಡೆಯ ವ್ಯಕ್ತಿಯವರೆಗೂ ಯೋಜನೆ ತಲುಪಿಸಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಬಜೆಟ್ ಅಧಿವೇಶನದಲ್ಲಿ ಉಭಯ ಸದನಗಳನ್ನು ಉದ್ದೇಶಿಸಿ ಅವರು, ಗ್ಯಾರೆಂಟಿಯಿಂದ ದಿವಾಳಿ ಆಗುತ್ತದೆ ಎಂಬ ಟೀಕೆ ವ್ಯಕ್ತವಾಗಿತ್ತು. ಆದರೆ ಈ ಎಲ್ಲ ಆರೋಪಗಳನ್ನು ಸರ್ಕಾರ ಸುಳ್ಳು ಎಂದು ಸಾಬೀತು ಮಾಡಿದೆ. ಜಿಎಸ್‌ಟಿ ಸಂಗ್ರಹದಲ್ಲೂ ರಾಜ್ಯ ಮುಂಚೂಣಿಯಲ್ಲಿದೆ ಎಂದರು.
ಸರ್ಕಾರದಿಂದ ವೇಗದ ಗತಿಯಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿದೆ. ರಾಜ್ಯದಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ರೈತರಿಗೆ ಉತ್ತಮ ಫಸಲು ಬಂದಿದೆ. ಸರ್ಕಾರದ ಕಲ್ಯಾಣ ಯೋಜನೆಗಳಿಂದ ಆತ್ಮಹತ್ಯೆ ಸಂಖ್ಯೆ ಕಡಿಮೆಯಾಗಿದೆ. ರೈತರ ಆತ್ಮಹತ್ಯೆ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ರಾಜ್ಯ ಸರ್ಕಾರ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದರು.




