ರಾಜ್ಯೋತ್ಸವದ ಅಂಗವಾಗಿ ಬಣ್ಣದ ಹಬ್ಬದ ಪ್ರಯುಕ್ತ ಶಿಬಿರ ಆಯೋಜನೆ
ಧಾರವಾಡ: ಚಿತ್ರಕಲಾ ಶಿಲ್ಪಿ ಶ್ರೀ ಡಿ.ವ್ಹಿ.ಹಾಲಭಾವಿ ರಾಷ್ಟ್ರೀಯ ಸ್ಮಾರಕ (ರಿ) ಟ್ರಸ್ಟ್ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬಣ್ಣದ ಹಬ್ಬ – ರಾಜ್ಯ ಮಟ್ಟದ ಯುವಕಲಾವಿದರ ಚಿತ್ರಕಲಾ ಶಿಬಿರವನ್ನು ಅಕ್ಟೋಬರ್ 29, 2025 ರಿಂದ ಅಕ್ಟೋಬರ್ 31, 2025 ರವರೆಗೆ ಧಾರವಾಡದ ಸರ್ಕಾರಿ ಆರ್ಟ ಗ್ಯಾಲರಿಯಲ್ಲಿ ಚಿತ್ರಕಲಾ ಶಿಬಿರವನ್ನು ಏರ್ಪಡಿಸಲಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಅಕ್ಟೋಬರ್ 29, 2025 ರಂದು ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ಆರ್ಟ ಗ್ಯಾಲರಿಯಲ್ಲಿ ಉದ್ಘಾಟನಾ ಸಮಾರಂಭ ನೆರವೇರುವುದು. ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಬೆಳಗಾವಿ ವಿಭಾಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಕೆ.ಎಚ್.ಚನ್ನೂರ ಹಾಗೂ ಧಾರವಾಡ ಹಿರೇಮಲ್ಲೂರ ಈಶ್ವರನ್ ಪದವಿಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಪ್ರಾಚಾರ್ಯ ಶಶಿಧರ ತೋಡಕರ ಭಾಗವಹಿಸುತ್ತಾರೆ. ಟ್ರಸ್ಟ್ ಅಧ್ಯಕ್ಷ ಬಿ.ಮಾರುತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಚಿತ್ರಕಲಾ ಶಿಲ್ಪಿ ಡಿ.ವ್ಹಿ. ಹಾಲಭಾವಿ ರಾಷ್ಟ್ರೀಯ ಸ್ಮಾರಕ (ರಿ) ಟ್ರಸ್ಟಿನ್ ಸದಸ್ಯರಾದ ಡಾ ಬಿ. ಎಚ್. ಕುರಿಯವರ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡುವರು. ಹಾಗೂ ಟ್ರಸ್ಟ್ ಸದಸ್ಯರುಗಳು ಉಪಸ್ಥಿತರಿರುವರು.
ರಾಜ್ಯ ಮಟ್ಟದ ಚಿತ್ರಕಲಾವಿದರ ಶಿಬಿರದಲ್ಲಿ ವಿವಿಧ ಜಿಲ್ಲೆಗಳಿಂದ ಯುವ ಚಿತ್ರಕಲಾವಿದರು ಭಾಗವಹಿಸುವರು. ಕಲಾವಿದರು ರಚಿಸಿರುವ ಕಲಾಕೃತಿಗಳ ಪ್ರದರ್ಶನ ಹಾಗೂ ಟ್ರಸ್ಟಿನ ಕಲಾಕೃತಿಗಳ ಪ್ರದರ್ಶನವನ್ನು ನವೆಂಬರ 01, 2025 ರಿಂದ ನವೆಂಬರ 10, 2025 ರವರೆಗೆ ಕರ್ನಾಟಕ ವಿದ್ಯಾವರ್ಧಕ ಸಂಘದ ಚಿತ್ರಕಲಾ ಪ್ರದರ್ಶನ ಭವನದಲ್ಲಿ ಏರ್ಪಡಿಸಲಾಗಿದೆ.
ಕಲಾಕೃತಿಗಳ ಪ್ರದರ್ಶನದ ಉದ್ಘಾಟನಾ ಸಮಾರಂಭವು ನವೆಂಬರ್ 1, 2025 ರಂದು ಸಂಜೆ 5:30 ಗಂಟೆಗೆ ಕರ್ನಾಟಕ ವಿದ್ಯಾವರ್ಧಕ ಸಂಘದ ಚಿತ್ರಕಲಾ ಪ್ರದರ್ಶನ ಭವನದಲ್ಲಿ ನೆರವೇರುವುದು. ಕಾರ್ಯಕ್ರಮದಲ್ಲಿ ಹಿರಿಯ ಚಿತ್ರಕಲಾವಿದ ಡಾ.ಎಸ್.ಸಿ.ಪಾಟೀಲ ಅವರು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಮಕ್ಕಳ ಸಾಹಿತಿಡಾ. ಆನಂದ ಪಾಟೀಲ ಅವರು ಭಾಗವಹಿಸುವರು. ಟ್ರಸ್ಟಿನ್ ಅಧ್ಯಕ್ಷ ಬಿ.ಮಾರುತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಚಿತ್ರಕಲಾವಿದರು, ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಕಲಾಸಕ್ತರು ಈ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬಹುದು.




