ಹೊಸಪೇಟೆ: ವಿಶ್ವಪಾರಂಪರಿಕ ತಾಣಗಳಲ್ಲಿ ಒಂದಾಗಿರುವ ಹಂಪಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ಹಾಗೂ ಕಲ್ಯಾಣ ಕರ್ನಾಟಕದ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರವನ್ನು ನಿರ್ಮಿಸಲಾಗುವುದು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಭೋಸರಾಜು ತಿಳಿಸಿದ್ದಾರೆ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ವಿಜಯನಗರ ಜಿಲ್ಲೆಯ ಕಮಲಾಪುರದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ನೂತನ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಕಮಲಾಪುರದ ಪ್ರಮುಖ ಜಾಗವನ್ನು ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಾಣಕ್ಕೆ ಉತ್ತಮ ಜಾಗವನ್ನು ಮಂಜೂರು ಮಾಡಲಾಗಿದೆ. ಪ್ರಮುಖ ರಸ್ತೆಯಲ್ಲಿ 10 ಏಕರೆ ಜಾಗ ಮಂಜೂರಾಗಿದ್ದು ಉತ್ತಮ ವಿನ್ಯಾಸದ ಮೂಲಕ ಜಾಗದ ಸದುಪಯೋಗ ಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಲ್ಯಾಣ ಕರ್ನಾಟಕದ ಅತಿದೊಡ್ಡ ಹಾಗೂ ರಾಜ್ಯದ ಎರಡನೇ ಅತಿದೊಡ್ಡ ತಾರಾಲಯವನ್ನು ಇಲ್ಲಿ ನಿರ್ಮಿಸಲು ಯೋಜಿಸಲಾಗಿದೆ. 12 ಮೀಟರ್ ನಾನೋಸೀಮ್ ಡೋಮ್ ತಾರಾಲಯ ಹಾಗೆಯೇ ಅತ್ಯಾಧುನಿಕ ಸೌಲಭ್ಯಗಳನು ಹೊಂದಿರುವ ವಿಜ್ಞಾನ ಕೇಂದ್ರ ನಿರ್ಮಿಸಲಾಗುವುದು. ಪ್ರವಾಸೋದ್ಯಮ ಇಲಾಖೆ ಈ ಜಾಗವನ್ನು ನೀಡಿದೆ. ಇಲ್ಲಿ ಕಾಮಗಾರಿಗಳ ಪ್ರಾರಂಭಕ್ಕೆ ಅಗತ್ಯ ತಯಾರಿ ನಡೆಸುವಂತೆ ಸೂಚನೆ ನೀಡಿದರು.
ಕಲ್ಯಾಣ ಕರ್ನಾಟಕ ಭಾಗದ ಯುವ ಜನರಲ್ಲಿ ವೈಜ್ಞಾನಿಕ ಮನೋಭಾವ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಆಶಯದಂತೆ ಪ್ರತಿ ಜಿಲ್ಲೆಗಳಲ್ಲೂ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಿಸಲಾಗುತ್ತಿದೆ. ಯುನೆಸ್ಕೋ ಪಾರಂಪರಿಕ ತಾಣವಾಗಿರುವ ಹಂಪಿಯಲ್ಲಿ ಉತ್ತಮ ದರ್ಜೆಯ ಸೌಲಭ್ಯಗಳನ್ನು ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.



