ಬೆಂಗಳೂರು: ಮಾನವ ಸಂಪನ್ಮೂಲದ ಸಮರ್ಪಕ ಬಳಕೆ ಹಾಗೂ ಯುವಜನರಿಗೆ ಉತ್ತಮ ಉದ್ಯೋಗ ಮತ್ತು ಉದ್ಯೋಗ ಅವಕಾಶಗಳನ್ನು ಒದಗಿಸಲು ಅನುಕೂಲವಾಗುವಂತೆ ರಾಜ್ಯ ಕೌಶಲ್ಯ ನೀತಿಯನ್ನು ಸಿದ್ದಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿದರು.
ಕೌಶಲ್ಯ ಅಭಿವೃದ್ಧಿ ಇಲಾಖೆ ವತಿಯಿಂದ ನೀಡುತ್ತಿರುವ ಕೋರ್ಸ್ಗಳಲ್ಲಿ ವಿಷಯಾಧಾರಿತ ಉದ್ಯಮಶೀಲತೆ ಅಭಿವೃದ್ಧಿ ತರಬೇತಿಯನ್ನು 25 ಸಾವಿರ ಯುವನಿಧಿ ಫಲಾನುಭವಿಗಳಿಗೆ ನೀಡಲಾಗುವುದು ಎಂದರು.
ಕೌಶಲ್ಯ ಅಭಿವೃದ್ಧಿ ಇಲಾಖೆ ವತಿಯಿಂದ ನೀಡುತ್ತಿರುವ ಕೋರ್ಸ್ಗಳಲ್ಲಿ ವಿಷಯಾಧಾರಿತ ಉದ್ಯಮಶೀಲತೆ ಅಭಿವೃದ್ಧಿ ತರಬೇತಿಯನ್ನು 25 ಸಾವಿರ ಯುವನಿಧಿ ಫಲಾನುಭವಿಗಳಿಗೆ ನೀಡಲಾಗುವುದು ಎಂದರು.
ಎಲೆಕ್ಟ್ರಾನಿಕ್ಸ್ ಮತ್ತು ಕಮುನಿಕೇಷನ್, ಮೆಕ್ಯಾಟ್ರಾನಿಕ್ಸ್, ಎಲೆಕ್ಟ್ರಿಕಲ್ಸ್ , ಎಲೆಕ್ಟ್ರಾನಿಕ್ಸ್, ಇಂಜಿನಿಯರಿಂಗ್, ರೋಬೊಟೆಕ್ಸ್ ಇತ್ಯಾದಿ ಹೆಚ್ಚುವರಿ ಡಿಫ್ಲೋಮೊ ಕೋರ್ಸ್ಗಳನ್ನು ಜಿಟಿಟಿಸಿ ಮಾದರಿಯಲ್ಲಿ ಹಂತಹಂತವಾಗಿ ಪ್ರಾರಂಭಿಸಲಾಗುವುದು. ಇದರಿಂದ 15 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗುವುದು ಎಂದರು.
ಕಲಬುರಗಿಯ ಕೆಜಿಟಿಟಿಐನಲ್ಲಿ ಸಿಎನ್ಸಿ ಯಂತ್ರವನ್ನು ಕೇಂದ್ರೀಕರಿಸುವ ಮೊದಲ ಜೇಷ್ಠತಾ ಕೇಂದ್ರವನ್ನು 16 ಕೋಟಿ ವೆಚ್ಚದಲ್ಲಿ ಸ್ಥಾಪನೆ, ಐಟಿಐ ಜಿಟಿಟಿಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಆಂಗ್ಲ ಮತ್ತು ಸಂಹನ ತರಬೇತಿಗೆ 5 ಕೋಟಿ ನೀಡಲಾಗುವುದು. ಶ್ರೇಷ್ಠತೆ ಮತ್ತು ಉನ್ನತ ಸಾಧನೆಯನ್ನು ಗುರುತಿಸಲು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುವ ಪ್ರತಿಕ್ಷಣಾರ್ಥಿಗಳನ್ನು ಕೌಶಲ್ಯ ಸ್ಪರ್ಧೆಗಳಿಗೆ ಸಿದ್ಧಪಡಿಸಲು ರಾಜ್ಯ ಕೌಶಲ್ಯ ಒಲಿಂಪಿಕ್ಸ್ ನ್ನೂ ಆಯೋಜಿಸಲಾಗುವುದು ಎಂದರು.
ಉದ್ಯೋಗ ಶೀಲತೆಯನ್ನು ಹೆಚ್ಚಿಸಲು ಡೂಯಲ್ ಸಿಸ್ಟಮ್ ಆಫ್ ಟ್ರೈನಿಂಗ್(ಡಿಎಸ್ಟಿ)ನ್ನು ರಾಜ್ಯದ ಎಲ್ಲಾ ಐಟಿಐಗಳಲ್ಲಿ ಕೈಗಾರಿಕೆಗಳು ಮತ್ತು ಉದ್ಯಮಗಳ ಸಹಭಾಗಿತ್ವದಲ್ಲಿ ಹಂತ ಹಂತವಾಗಿ ವಿಸ್ತರಿಸಲಾಗುವುದು ಎಂದರು.
ಒಂದು ಲಕ್ಷ ಮಹಿಳಾ ಸ್ವಸಹಾಯ ಗುಂಪುಗಳನ್ನು ಮೀನುಗಾರಿಕೆ, ಕುಟುಕ, ಕುರಿ, ಮೇಕೆ ಸಾಗಾಣಿಕೆ, ಜೇನು ಸಾಕಾಣಿಕೆ ಮತ್ತು ಕಿರು ಉದ್ಯಮ ಸ್ಥಾಪಿಸಲು 100 ಕೋಟಿ ವೆಚ್ಚ ಮಾಡಲಾಗುವುದು ಎಂದರು.




