ಬೆಂಗಳೂರು: ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರ ಅಣ್ಣನ ಮಗ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ. ಅತ್ಯಾಚಾರದ ವಿಡಿಯೊ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಅತ್ಯಾಚಾರದ ಸಂಗತಿಯನ್ನು ದುರ್ಬಲಗೊಳಿಸಲು ಡಿ.ಕೆ. ಶಿವಕುಮಾರ್ ಹಾಗೂ ಮತ್ತೊಬ್ಬರ ಮೇಲೆ ಹೇಳುತ್ತಿದ್ದಾರೆ. ಅವರು ಈ ನೆಲದ ಕಾನೂನಿಗೆ ಗೌರವ ಕೊಡಬೇಕು. ಅಣ್ಣನ ಮಗ ಅಪರಾಧಿಯಲ್ಲ ಆರೋಪಿ ಅಷ್ಟೇ ಎಂದಿದ್ದಾರೆ, ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಟ್ಟಂತೆ ನಾನೂ ಕೂಡ ಆರೋಪಿ ಎಂದೇ ಹೇಳಿದ್ದೇನೆ ಎಂದರು.
ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದತಿಗೆ ಮೋದಿಯವರಿಗೆ ಪತ್ರ ಬರೆದಿದ್ದು ಈವರೆಗೆ ಅವರಿಂದ ಪ್ರತಿಕ್ರಿಯೆ ಬಂದಿಲ್ಲ ಎಂದರು. ಎಲ್ಲರಿಗೂ ಪ್ರಧಾನಮಂತ್ರಿಗಳ ಕಚೇರಿಯಿಂದ ಕೂಡಲೇ ಉತ್ತರ ದೊರಕುತ್ತದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಹಾಗಂತ ನಂಬಿರುವುದೇ ನಿಮ್ಮ ತಪ್ಪು. ನಾವು ಬರೆದಿರುವ ಅನೇಕ ಪತ್ರಗಳಿಗೆ ಅವರು ಉತ್ತರ ಕೊಟ್ಟಿಲ್ಲ. ಮೋದಿಯವರು ಸೆಲೆಕ್ಟಿವ್ ಎಂದು ಹೇಳುವುದಿಲ್ಲ ಎಂದರು.
ಚುನಾಯಿತ ಸರ್ಕಾರದ ಮುಖ್ಯಮಂತ್ರಿ ಪ್ರಧಾನಿಗಳಿಗೆ ಪತ್ರ ಬರೆದಾಗ ಸ್ವಾಭಾವಿಕವಾಗಿ ಉತ್ತರ ಕೊಡುತ್ತಾರೆ ಎಂಬ ನಂಬಿಕೆ ಇದೆ. ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಲು ಬರೆದ ಮೊದಲ ಪತ್ರಕ್ಕೆ ಉತ್ತರ ಕೊಟ್ಟಿಲ್ಲ. ಎರಡನೇ ಪತ್ರಕ್ಕೆ ಉತ್ತರ ಕೊಡುತ್ತಾರೆನೋ ನೋಡೋಣ ಎಂದರು.




