ಬೆಳಗಾವಿ: ಜನಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದ್ದು ಹಲವು ಅಭಿವೃದ್ಧಿ ಯೋಜನೆಗಳ ಮೂಲಕ ಮುಂಚೂಣಿಯಲ್ಲಿರುವ ರಾಜ್ಯದ 50 ಗ್ರಾಮ ಪಂಚಾಯ್ತಿಗಳನ್ನು, ಪಟ್ಟಣ ಪಂಚಾಯ್ತಿಗಳನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿದರು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ, ಬಿಜೆಪಿಯ ದಿನಕರ ಶೆಟ್ಟಿ ಅವರ ಪ್ರಶ್ನೆಗೆ ಪೌರಾಡಳಿತ ಸಚಿವ ರಹೀಮ್ ಖಾನ್ ಅವರು ಉತ್ತರ ನೀಡುತ್ತಿದ್ದ ವೇಳೆ ಮಧ್ಯ ಪ್ರವೇಶಿಸಿದ ಸುರೇಶ್, ಜನಸಂಖ್ಯೆ ಹೆಚ್ಚಿರುವ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾಪವಿದ್ದು ಹಂತ ಹಂತವಾಗಿ ಈ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ಮಾಹಿತಿ ನೀಡಿದರು.
ಕಳೆದ 2015ರ ಮಾರ್ಚ್ 19ರಂದು ನಡೆದ ಸಂಪುಟ ಸಭೆಯಲ್ಲಿ ಯಾವ ಗ್ರಾಮ ಪಂಚಾಯತಿಯ ಜನಸಂಖ್ಯೆ 15000 ಕ್ಕಿಂತ ಹೆಚ್ಚಿದೆಯೋ ಅಂತಹ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯ್ತಿಗಳಾಗಿ ಮೇಲ್ದರ್ಜೆಗೇರಿಸಬೇಕು ಎಂಬ ತೀರ್ಮಾನ ಕೈಗೊಳ್ಳಲಾಗಿದೆ ಅದನ್ನು ಈಗ ಹಂತ ಹಂತವಾಗಿ ಜಾರಿಗೆ ತರಲಾಗುತ್ತಿದೆ ಎಂದರು
ಕಾಂಗ್ರೆಸ್ ನ ಶಿವಲಿಂಗೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ 144.75 ಕೋಟಿ ರೂ. ಮೊತ್ತದಲ್ಲಿ ಶೀತಲಗೃಹ ಮತ್ತು ಇತರ ಮೂಲಸೌಕರ್ಯ ಕಾರ್ಯಗಳನ್ನು ಕೈಗೊಳ್ಳಲು ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ ಎಂದರು.
ಕೃಷಿ ಮಾರುಕಟ್ಟೆಗಳಲ್ಲಿ ಮೂಲಸೌಕರ್ಯ ಸೃಷ್ಟಿಸಲು ಐ ಆರ್ ಡಿ ಪಿ-30 ಯೋಜನೆಯಡಿ 254 ಕೋಟಿ ರೂ.ಗಳ ಅನುದಾನವನ್ನು ಮಂಜೂರು ಮಾಡುವಂತೆ ಕಳೆದ ಮೇ 18ರಂದು ಕೋರಲಾಗಿತ್ತು. ಆ.8ರಂದು ಆರ್ಥಿಕ ಇಲಾಖೆ 144. 75 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಅನುಮೋದನೆ ನೀಡಿರುತ್ತದೆ ಎಂದರು.
ಕೃಷಿ ಉತ್ಪನ್ನ ಮಾರುಕಟ್ಟೆ ಅಧಿನಿಯಮಕ್ಕೆ ತಿದ್ದುಪಡಿ ತಂದ ನಂತರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಕೃಷಿ ಉತ್ಪನ್ನಗಳ ಆವಕ ಹೆಚ್ಚಾಗಿ ಬರುತ್ತಿವೆ. ರೈತರು ಬೆಳೆಗೆ ಯೋಗ್ಯ ದರ ಹಾಗೂ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಶೀತಲ ಗೃಹಗಳನ್ನು ಸ್ಥಾಪಿಸಲು ಮತ್ತು ಹೆಚ್ಚು ಮೂಲಸೌಲಭ್ಯ ಕಲ್ಪಿಸಲು ಸಚಿವರು ಹಾಗೂ ಶಾಸಕರಿಂದ ಕೋರಿಕೆಗಳು ಸ್ವೀಕೃತವಾಗಿದೆ. ಈ ಹಿನ್ನಲೆಯಲ್ಲಿ 2024-25ನೇ ಸಾಲಿನ ಆರ್ಡಿಎಫ್-30 ಯೋಜನೆಯಡಿ 374.75 ಕೋಟಿ ರೂ.ಗಳ ಹೆಚ್ಚುವರಿ ಅನುದಾನ ಮಂಜೂರು ಮಾಡುವಂತೆ ಆರ್ಥಿಕ ಇಲಾಖೆಯನ್ನು ಕೋರಲಾಗಿದೆ ಎಂದರು.




