ಬೆಂಗಳೂರು: ಒತ್ತುವರಿ ತೆರವು ಕಾರ್ಯಚರಣೆ ಹೆಸರಿನಲ್ಲಿ ರೈತರಿಗೆ ವಕ್ಫ್ ಬೋರ್ಡ್ ಮೂಲಕ ರೈತರಿಗೆ ನೋಟಿಸ್ ನೀಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ರಾಜ್ಯಾದ್ಯಂತ ಹೋರಾಟಕ್ಕೆ ಚಾಲನೆ ನೀಡಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಎರಡು ದಿನಗಳ ಕಾಲ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಶಾಸಕರು, ಮಾಜಿ ಸಂಸದರು, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿದಂತೆ ಪದಾಧಿಕಾರಿಗಳು ಧರಣಿ ನಡೆಸಿದರು.
ಶಿವಮೊಗ್ಗದಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆದರೆ, ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ, ಕಲಬುರಗಿಯಲ್ಲಿ ವಿಧಾನಪರಿಷತ್ ವಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೀಗೆ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿಭಟನೆ ನಡೆಸಿದರು. ಯಾವುದೇ ಕಾರಣಕ್ಕೂ ರೈತರು, ದೇವಸ್ಥಾನಕ್ಕೆ ಜಮೀನುಗಳಿಗೆ ನೋಟಿಸ್ ನೀಡಬಾರದೆಂದು ಆಗ್ರಹಿಸಿದರು.
ವಕ್ಫ್ ನ್ಯಾಯಾಧಿಕರಣ ರದ್ದಾಗಬೇಕು. 6.70 ಲಕ್ಷ ಎಕರೆ ವಕ್ಫ್ ಆಸ್ತಿ ಎಂದು ಸ್ವಾಧೀನಕ್ಕೆ ಯತ್ನಿಸಲಾಗುತ್ತಿದೆ. ಕರ್ನಾಟಕದಲ್ಲಿ ಜನ ಜಾಗೃತಿ ಮಾಡುವ ಅವಶ್ಯಕತೆ ಇದೆ. ಜನಜಾಗೃತಿ ಅಭಿಯಾನ ಮಾಡಿ ಜೆಪಿಸಿಗೆ ವರದಿ ಸಲ್ಲಿಕೆ ಮಾಡುತ್ತೇವೆ. ಎಷ್ಟೋ ಮಾಹಿತಿಗಳು ಇನ್ನೂ ಕೇಂದ್ರ ಸರ್ಕಾರ, ಜೆಪಿಸಿಗೆ ಸಿಕ್ಕಿಲ್ಲ. ಜಮೀರ್ ಅಹಮದ್ ಧಮ್ಕಿ ಹಾಕಿರುವ ಬಗ್ಗೆ ಅಧಿಕಾರಿಗಳು ಬೆಚ್ಚಿ ಬಿದ್ದಿದ್ದಾರೆ ಎಂದು ಪ್ರತಿಭಟನಾನಿರತರು ದೂರಿದರು.
ಹಿಂದೂ ಸಮುದಾಯದವರನ್ನು ರಕ್ಷಣೆ ಮಾಡಬೇಕು. ನೋಟೀಸ್ ಕೊಟ್ಟಿದ್ದು ಅಷ್ಟೇ ಅಲ್ಲ, ನೋಟೀಸ್ ಕೊಡದೇ ವಕ್ಫ್ ಎಂದು ಪಹಣಿಯಲ್ಲಿ ನಮೂದು ಮಾಡಿದ್ದಾರೆ ಎಂದು ಆರೋಪಿಸಿದರು.




