ಬೆಳಗಾವಿ: ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯ ಎಂದು ಘೋಷಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಡ್ರಗ್ಸ್ ಸರಬರಾಜು ಮಾರಾಟ ಮತ್ತು ಸೇವನೆ ವಿರುದ್ಧ ನಿರಂತರ ಸಮರ ಸಾರಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಕೇಶವ ಪ್ರಸಾದ್ ಎಸ್ ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ಡ್ರಗ್ಸ್ ದಂಧೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದನ್ನು ತಡೆಗಟ್ಟುವ ದೃಷ್ಟಿಯಿಂದ ಪ್ರತ್ಯೇಕ ಮಾದಕವಸ್ತು ನಿಗ್ರಹದಳ ಸ್ಥಾಪಿಸಿ ಅದಕ್ಕೆ ಹೆಚ್ಚಿನ ಅಧಿಕಾರಿಗಳನ್ನು ನೇಮಿಸಲಾಗಿದೆ. ಅತ್ಯಂತ ಹೆಚ್ಚು ನಿಗಾ ವಹಿಸಲಾಗಿದೆ ಎಂದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಮಾದಕ ವಸ್ತು ಸೇವನೆ ಮತ್ತು ಸಾಗಾಣಿಕೆ ಪ್ರಕರಣಗಳಲ್ಲಿ ಭಾಗಿಯಾಗುವ ವಿದೇಶಿ ಪುಜೆಗಳನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಉತ್ತರ ಕರ್ನಾಟಕದ ವಿಜಯಪುರ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಗಾಂಜಾ ಮಿಶ್ರಿತ ಮಾವಾ ಸ್ಥಳೀಯ ಗುಟಕಾ ಮಾರಾಟ ಕಂಡುಬಂದಿರುವುದಿಲ್ಲ ಮತ್ತು ಈ ಸಂಬಂಧ ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿರುವುದಿಲ್ಲ ಎಂದರು.
ಮಾದಕ ವಸ್ತುಗಳ ಹಾವಳಿಯ ಪ್ರಕರಣಗಳನ್ನು ರಾಜ್ಯ ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, 2023ರಲ್ಲಿ 133.58 ಕೋಟಿ ರೂ ಮೌಲ್ಯದ 10,626 ಕೆ ಜಿ ಗಂಜಾ ಮತ್ತು ಇನ್ನಿತರ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ. 2024ರಲ್ಲಿ 164.91 ಕೋಟಿ ರೂ ಮೌಲ್ಯದ 6609 ಕೆ.ಜಿ. ಗಾಂಜಾ ಮತ್ತು ಇತರೆ ಮಾದಕ ಪದಾರ್ಥ ವಶಕ್ಕೆ ಪಡೆಯಲಾಗಿದೆ. 2025ರಲ್ಲಿ 185.72 ಲಕ್ಷ ರೂ ಮೌಲ್ಯದ 5079 ಕೆ.ಜಿ. ಗಾಂಜಾ ಮತ್ತು ಇನ್ನೀತರ ಮಾದಕ ಪದಾರ್ಥ ವಶಕ್ಕೆ ಪಡೆಯಲಾಗಿದೆ ಎಂದರು.