ಬೆಂಗಳೂರು: ಬರುವ ಒಂದೂವರೆ ತಿಂಗಳೊಳಗಾಗಿ ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ 11 ಬಿ ಖಾತೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆಗೆ ತಿಳಿಸಿದರು.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಪ್ರಶ್ನೋತ್ತರ ವೇಳೆಯಲ್ಲಿ ಹಿರಿಯ ಶಾಸಕ ಬಸನಗೌಡ ಆರ್.ಪಾಟೀಲ್ ಯತ್ನಾಳ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್‌ರಾಜ್ ತಿದ್ದುಪಡಿ ವಿಧೇಯಕಕ್ಕೆ ಸಂಬಂಧಿಸಿದಂತೆ 29 ಆಕ್ಷೇಪಣೆಗಳು ಬಂದಿದ್ದು, ಅವುಗಳನ್ನು ಪರಿಶೀಲಿಸಿ ಇನ್ನು 15 ದಿನಗಳಲ್ಲಿ ನಿಯಮಗಳನ್ನು ರೂಪಿಸಲಾಗುವುದು ಎಂದರು.
ಇ-ಸ್ವತ್ತು ಸಮಸ್ಯೆಗಳ ಸುಧಾರಣೆಗೆ ಸಮಿತಿ ರಚಿಸಲಾಗಿದೆ. ಅಲ್ಲದೆ ದಿಶಾಂಕ ಆ್ಯಪ್ ನ ಲೋಪದೋಷಗಳನ್ನು ಗಮನಕ್ಕೆ ತಂದರೆ ಸರಿಪಡಿಸಲಾಗುವುದು ಎಂದರು.
ರಾಜ್ಯದ ಎಲ್ಲಾ ಪಂಚಾಯ್ತಿಗಳಲ್ಲೂ ಮೈಕ್ರೋಗ್ರಿಡ್ ಪರಿಕಲ್ಪನೆ ಜಾರಿಗೆ ತಂದು ವಿದ್ಯುತ್ ಖರೀದಿಸಲಾಗುವುದು. ಈ ಮೈಕ್ರೋಗ್ರಿಡ್ ವಿನೂತನ ಯೋಜನೆ ಅನುಷ್ಠಾನಕ್ಕೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಟೆಂಡರ್ ಕರೆಯಲಾಗಿದೆ. ಈ ಯೋಜನೆಯಡಿ ಉತ್ಪಾದನೆಯಾದ ವಿದ್ಯುತ್ತನ್ನು ಬೀದಿ ದೀಪ, ಪಂಚಾಯ್ತಿ ಕಚೇರಿಗಳಿಗೆ ಬಳಕೆ ಮಾಡಿ ಉಳಿದ ವಿದ್ಯುತ್‌ನ್ನು ಗ್ರಿಡ್‌ಗೆ ಒಪ್ಪಿಸಲಾಗುವುದು ಎಂದರು.
ಹೊಸ ದಾಖಲೆ: ಆಸ್ತಿ ತೆರಿಗೆ ಸಂಗ್ರಹಣೆಯಲ್ಲಿ ಗ್ರಾಮ ಪಂಚಾಯಿತಿಗಳು ಹೊಸ ದಾಖಲೆಯನ್ನು ನಿರ್ಮಿಸಿವೆ. ಕಳೆದ ಎರಡು ವರ್ಷದಲ್ಲಿ 1237 ಕೋಟಿ ರೂ. ತೆರಿಗೆ ಸಂಗ್ರಹಿಸಲಾಗಿದೆ. ಇದು ದೇಶದಲ್ಲೇ ಹೊಸ ದಾಖಲೆಯಾಗಿದೆ ಎಂದರು.
ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಕ್ರಮಬದ್ಧ ಆಸ್ತಿಗಳಿಗೆ ನಿಗದಿತ ನಮೂನೆ 9 ಹಾಗೂ 11ಎಗಳನ್ನು ನೀಡಲಾಗುತ್ತಿದ್ದು, ಕ್ರಮಬದ್ಧವಲ್ಲದ ಆಸ್ತಿಗಳಿಗೆ ನಮೂನೆ 11ಬಿ ಅನ್ನು ಪಂಚಾಯ್ತಿ ಅಭಿವೃದ್ದಿ ಅಧಿಕಾರಿಯ ಡಿಜಿಟಲ್ ಸಹಿ ಮೂಲಕ ವಿತರಿಸಲಾಗುತ್ತಿದೆ ಎಂದರು.
ಗ್ರಾಮೀಣ ರಸ್ತೆ ದುರಸ್ತಿ ಅಭಿವೃದ್ದಿಗೆ ಅನುದಾನ ಬಿಡುಗಡೆಗೆ ಮಾಡಲಾಗಿರುವ ನಿಯಮಾವಳಿಗಳನ್ನು ಸರಳೀಕರಣ ಮಾಡಿ ಅನುದಾನ ನೀಡಲಾಗುವುದು. ಈ ಮೂಲಕ 15ರಿಂದ 18 ಕಿ.ಮೀ ರಸ್ತೆಯನ್ನು ಶಾಸಕರ ವಿವೇಚನೆಯಡಿ ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿಪಡಿಸಲಾಗುವುದು ಎಂದರು.



