ಬೆಂಗಳೂರು: ರಾಜ್ಯದ 31 ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿಧಾನಸಭೆಗೆ ತಿಳಿಸಿದರು.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಪ್ರಶ್ನೋತ್ತರ ವೇಳೆಯಲ್ಲಿ ಆಡಳಿತ ಪಕ್ಷದ ಶಾಸಕ ಯು.ಬಿ.ಬಣಕಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಈ ಶಾಲೆಗಳನ್ನು ಪ್ರಾರಂಭಿಸಲು ಆಡಳಿತಾತಕ ಅನುಮೋದನೆ ದೊರೆತಿದೆ ಎಂದರು.
ಈ ಶಾಲೆಗಳ ಕಟ್ಟಡ ನಿರ್ಮಾಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಬ್ಯಾಡಗಿ ತಾಲ್ಲೂಕಿನ ಹಿರೇಅಣಗಿ ಗ್ರಾಮದಲ್ಲಿ 34.45 ಕೋಟಿ ರೂ. ವೆಚ್ಚದಲ್ಲಿ ಶ್ರಮಿಕ ವಸತಿ ಶಾಲೆ ನಿರ್ಮಾಣ ಮಾಡಲು ಆಡಳಿತಾತಕ ಅನುಮೋದನೆ ದೊರೆತಿದ್ದು, ಆಯವ್ಯಯದಲ್ಲಿ ಘೋಷಿಸಿರುವಂತೆ ಪ್ರತಿ ಜಿಲ್ಲೆಗೊಂದು ಶ್ರಮಿಕ ವಸತಿಶಾಲೆ ನಿರ್ಮಾಣ ಮಾಡಲು ಅವಕಾಶವಿದೆ ಎಂದರು.




