ಬೆಂಗಳೂರು: ಮಾಜಿ ಸಿಎಂ ಹಾಗೂ ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಡಿವಿ ಸದಾನಂದ ಗೌಡ ಅವರ ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿರುವ ಸೈಬರ್ ವಂಚಕರು ಆ ಖಾತೆಗಳಿಂದ ಮೂರು ಲಕ್ಷ ರೂಪಾಯಿಗಳನ್ನು ದೋಚಿದ್ದಾರೆ.
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
- ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಸ ಸಂಗ್ರಹಣೆ ಇಲ್ಲ
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
ಸದಾನಂದ ಗೌಡ ಅವರು ಹೊಂದಿರುವ ಹೆಚ್‌ಡಿಎಫ್‌ಸಿ, ಎಸ್‌ಬಿಐ ಹಾಗೂ ಆಕ್ಸಿಸ್ ಬ್ಯಾಂಕಿನ ಖಾತೆಯಲ್ಲಿದ್ದ ಹಣ ಕಳ್ಳತನವಾಗಿದೆ. ಯುಪಿಐ ಮೂಲಕ ಹ್ಯಾಕ್ ಮಾಡಿ ಹಣ ಕಳ್ಳತನ ಮಾಡಿದ್ದಾರೆ.
ಸೈಬರ್ ವಂಚಕರ ವಿಷಯದಲ್ಲಿ ದೊಡ್ಡ ಪ್ರಮಾಣದಲ್ಲಿ ಅರಿವು ಮೂಡಿಸುವ ಕೆಲಸ ನಡೆದಿರುವ ಸಮಯದಲ್ಲೇ ಸದಾನಂದ ಗೌಡ ಅವರ ಬ್ಯಾಂಕ್ ಖಾತೆಗಳಿಗೆ ಸೈಬರ್ ವಂಚಕರು ಕನ್ನ ಹಾಕಿರುವ ವಿಷಯ ದೊಡ್ಡ ಪ್ರಮಾಣದಲ್ಲಿ ಚರ್ಚೆಯಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸದಾನಂದ ಗೌಡ ಸುದ್ದಿಗಾರರೊಂದಿಗೆ ಮಾತನಾಡಿ, ಸೈಬರ್ ವಂಚಕರು ತಮ್ಮ ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ ಹಣ ದೋಚಿರುವ ಅಂಶವನ್ನು ಬಹಿರಂಗಪಡಿಸಿದ್ದಾರೆ.
ತಮ್ಮ ಹೆಸರಿನಲ್ಲಿರುವ ಖಾತೆಗಳಿಂದ ಸೈಬರ್ ವಂಚಕರು ತಲಾ ಒಂದು ಲಕ್ಷ ರೂಪಾಯಿಯಂತೆ ಮೂರು ಲಕ್ಷ ರೂಪಾಯಿಗಳನ್ನು ತೋರಿಸಿದ್ದಾರೆ. ನಕಲಿ ಯುಪಿಐ ಐಡಿ ತಯಾರಿಸಿ, ಹಣ ದೋಚಿದ್ದಾರೆ. ಈ ಬಗ್ಗೆ ಸೈಬರ್ ಕ್ರೈಮ್ ಗೆ ದೂರು ನೀಡುತ್ತೇನೆ ಎಂದರು.




