ಗ್ಯಾರೆಂಟಿ ಯೋಜನೆಗಳಿಂದ ಬಡವರಿಗೆ ಅನುಕೂಲ
ಬಳ್ಳಾರಿ: ರಾಜ್ಯ ಸರ್ಕಾರ ಜಾರಿಗೊಳಿಸಿದ ಗ್ಯಾರೆಂಟಿ ಯೋಜನೆಗಳಿಂದ ಬಡವರಿಗೆ ಕೂಲಿ ಕಾರ್ಮಿಕರಿಗೆ ಬಹಳ ಉಪಯೋಗವಾಗುತ್ತಿವೆ ಎಂದು ಸಂಗನಕಲ್ಲು ಗ್ರಾಮದ ಹಿರಿಯ ಮುಖಂಡ ಪಂಪನಗೌಡ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಆಶ್ರಯದಲ್ಲಿ ಚಿಗುರು ಕಲಾತಂಡದಿಂದ ಬಳ್ಳಾರಿ ತಾಲ್ಲೂಕಿನ ಸಂಗನಕಲ್ಲು ಗ್ರಾಮದಲ್ಲಿ ಸೋಮವಾರ ಏರ್ಪಡಿಸಿದ್ದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತ ಬೀದಿ ನಾಟಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರಿಗೆ ಅತ್ಯಂತ ಮೆಚ್ಚುಗೆಯಾದ ಶಕ್ತಿ ಯೋಜನೆಯಡಿ ಬಸ್ ಪ್ರಯಾಣ, ಪ್ರತಿ ತಿಂಗಳು ಗೃಹ ಒಡತಿಯರಿಗೆ 2 ಸಾವಿರ ರೂ., ಗೃಹ ಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್, ಅನ್ನಭಾಗ್ಯ, ಯುವ ನಿಧಿ ಯೋಜನೆಗಳಿಂದ ಅನುಕೂಲವಾಗುತ್ತಿದೆ ಎಂದರು.
ಗ್ರಾಪಂ ಹಂತದಲ್ಲಿ ಸರ್ಕಾರದ ಯೋಜನೆಗಳನ್ನು ಬೀದಿ ನಾಟಕ ಮೂಲಕ ತಿಳಿಸಲು ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಜನರಿಗೆ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕೆಂಬ ಅರಿವು ಮೂಡುತ್ತದೆ. ಇದರಿಂದ ಸರ್ಕಾರದ ಯೋಜನೆಗಳು ಪಡೆದುಕೊಳ್ಳುವುದಕ್ಕೆ ಸಹಕಾರಿಯಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಸಂಗನಕಲ್ಲು ಗ್ರಾಮ ಪಂಚಾಯತಿ ಕಾರ್ಯದರ್ಶಿ ತಿಮ್ಮಪ್ಪ, ಬಿಲ್ ಕಲೆಕ್ಟರ್ ಹುಲುಗಪ್ಪ, ಗ್ರಾಮದ ಹಿರಿಯರಾದ ಕೆ.ಶಂಕ್ರಪ್ಪ, ಮಲ್ಲಿಕಾರ್ಜುನ, ಈಶ್ವರ್ ಗೌಡ ಮತ್ತು ಕಲಾವಿದರಾದ ಹುಲುಗಪ್ಪ ಎಸ್.ಎಂ, ಎಚ್.ರಮೇಶ್, ಬಿ.ಆನಂದ, ಹೆಚ್.ರ‍್ರಿಸ್ವಾಮಿ, ಡಿ.ಹೇಮಂತ, ವೈ.ತಾಯಪ್ಪ, ಎಚ್.ಗಂಗಮ್ಮ, ರುತ್ತಮ್ಮ ಹಾಗೂ ಇತರರು ಇದ್ದರು.




