ಬೆಳಗಾವಿ: ರಾಜ್ಯದ ವಿವಿಧ ಭಾಗಗಳಲ್ಲಿ ವರದಿಯಾಗಿರುವ ಭ್ರೂಣ ಹತ್ಯೆ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರತ್ಯೇಕ ನೋಡಲ್ ಅಧಿಕಾರಿಯೊಬ್ಬರನ್ನು ನೇಮಿಸಿ ಭ್ರೂಣ ಹತ್ಯೆ ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಸಿ.ಟಿ.ರವಿ ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ರಾಜ್ಯದ ಕೆಲ ಜಿಲ್ಲೆಗಳ ಕೆಲವೇ ಆಸ್ಪತ್ರೆಗಳಲ್ಲಿ ಗಂಡು ಮಕ್ಕಳ ಜನನದ ವಿವರ ಗರಿಷ್ಟ ಪ್ರಮಾಣದಲ್ಲಿ ದಾಖಲಾಗುತ್ತಿರುವುದನ್ನು ಗುಪ್ತಚರ ಇಲಾಖೆ ಮೂಲಕ ಕಂಡುಕೊಳ್ಳಲಾಗುತ್ತಿದೆ ಎಂದರು.
ಯಾವ ತಾಲೂಕಿನಲ್ಲಿ ಗಂಡು ಹೆಣ್ಣಿನ ಅನುಪಾತ ಹೆಚ್ಚುತ್ತಿದೆ? ಯಾವ ಆಸ್ಪತ್ರೆಯಲ್ಲಿ ಏನಾಗುತ್ತಿದೆ? ಎನ್ನುವಂತಹ ಅಂಶಗಳ ಮೇಲೆ ಮೇಲ್ವಿಚಾರಣೆ ನಡೆಸಿ, ಅಂತಹ ಜಾಲವನ್ನು ಹತ್ತಿಕ್ಕಲು ಸೂಕ್ತ ಕ್ರಮವಹಿಸುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಕಳೆದ ಎರಡು ವರ್ಷಗಳಲ್ಲಿ ದಾಖಲಾಗಿರುವ ಮೂರು ಭ್ರೂಣಹತ್ಯೆ ಪ್ರಕರಣಗಳ ಸಂಬಂಧ 13 ಮಂದಿಯನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರ ಗ್ರಾಮಾಂತರ ಜಿಲ್ಲೆಯ ಎಸ್ ಪಿ ಜಿ ಆಸ್ಪತ್ರೆಯ 6 ಮಂದಿಯನ್ನು, ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸರ್ಕಾರಿ ವಸತಿ ಗೃಹದ 6 ಮಂದಿ ಮತ್ತು ಬೆಂಗಳೂರ ನಗರ ಜಿಲ್ಲೆಯ ದ್ಯಾನಿಷ್ ಪಾಲಿ ಕ್ಲಿನಿಕ್ ಆಸ್ಪತ್ರೆಯ ಒಬ್ಬರನ್ನು ಬಂಧಿಸಲಾಗಿದೆ ಎಂದರು.




