ಬಳ್ಳಾರಿ: ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಜಿಲ್ಲೆಯಲ್ಲಿ ಸಾರ್ವಜನಿಕ ಆಸ್ತಿಯನ್ನಾಗಲೀ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಸಾರ್ವಜನಿಕವಾಗಿ ಕಾಣುವಂತೆ ಗೋಡೆ ಬರಹ, ಜಾಹೀರಾತು ಪೋಸ್ಟರ್ ಆಳವಡಿಕೆ ಸೇರಿದಂತೆ ಇನ್ನಿತರೆ ಫಲಕಗಳನ್ನು ಹಾಕುವ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ವಿರೂಪಗೊಳಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸಾರ್ವಜನಿಕ ಪ್ರದೇಶಗಳ ಮೇಲೆ ಅಧಿಕಾರ ಹೊಂದಿರುವ ಸ್ಥಳೀಯ ಪ್ರಾಧಿಕಾರದಿಂದ ಲಿಖಿತ ಅನುಮತಿಯಿಲ್ಲದೇ ಯಾವುದೇ ತರಹದ ಗೋಡೆ ಬರಹ, ಜಾಹೀರಾತು ಪೋಸ್ಟರ್ ಅಳವಡಿಸುವಂತಿಲ್ಲ ಮತ್ತು ಸಾರ್ವಜನಿಕ ವೀಕ್ಷಣೆಗೆ ತೆರೆದಿರುವ ಯಾವುದೇ ಸ್ಥಳಗಳಲ್ಲಿ ಅಂಟಿಸಬಾರದು ಮತ್ತು ಕೆತ್ತನೆ ಮಾಡುವಂತಿಲ್ಲ. ಇಂತಹ ಕೃತ್ಯಗಳಿಗೆ ಕುಮ್ಮಕ್ಕು ಅಥವಾ ಸಲಹೆ ನೀಡಿದರೆ ಅಂತಹವರನ್ನು ಆರು ತಿಂಗಳು ಕಾರಾಗೃಹ ಶಿಕ್ಷೆ ಸೇರಿದಂತೆ ದಂಡ ವಿಧಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ಚುನಾವಣೆ ಪ್ರಚಾರದಿಂದ ಇಂತಹ ವಿರೂಪಗಳು ಹೆಚ್ಚಾಗುವ ಸಾಧ್ಯತೆಯಿದ್ದು, ಸ್ಥಳೀಯ ಪ್ರಾಧಿಕಾರದ ಪರವಾನಿಗೆ ಇಲ್ಲದೇ ಯಾವುದೇ ತರಹದ ಜಾಹೀರಾತುಗಳನ್ನು ಸಾರ್ವಜನಿಕ ವೀಕ್ಷಣೆಗೆ ತೆರೆದಿರುವ ಯಾವುದೇ ಸ್ಥಳಗಳಲ್ಲಿ ಪ್ರದರ್ಶಿಸುವಂತಿಲ್ಲ. ಸಾರ್ವಜನಿಕ, ಖಾಸಗಿ ಕಟ್ಟಡಗಳು ಮತ್ತು ಇತರ ತೆರೆದ ಸ್ಥಳಗಳ ಗೋಡೆಗಳ ಮೇಲೆ ಬರೆದು ಅಥವಾ ಭಿತ್ತಿಪತ್ರಗಳನ್ನು ಬರೆದು ವಿರೂಪಗೊಳಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಆರು ತಿಂಗಳವರೆಗೆ ಹಾಗೂ ವಿಸ್ತರಿಸಬಹುದಾದಂತಹ ದಂಡನೆಗೆ ಗುರಿಪಡಿಸಲಾಗುತ್ತದೆ ಎಂದಿದ್ದಾರೆ.
ಈ ಆದೇಶ ಇಡೀ ಜಿಲ್ಲೆಗೆ ಅನ್ವಯಿಸಲಿದ್ದು, ಚುನಾವಣಾ ಪ್ರಕ್ರಿಯೆಯು ಪೂರ್ಣಗೊಳ್ಳುವವರೆಗೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.




