ಬೆಂಗಳೂರಿಗೆ ಸರಬರಾಜಾಗುವ ಮಾದಕ ವಸ್ತುಗಳ ಮೇಲೆ ಪೊಲೀಸರಿಂದ ತೀವ್ರ ನಿಗಾ
ಬೆಂಗಳೂರು: ಹೊಸ ವರ್ಷವನ್ನು ಸ್ವಾಗತಿಸಲು ರಾಜಧಾನಿ ಬೆಂಗಳೂರಿನ ಪಂಚತಾರಾ ಹೋಟೆಲ್ ಗಳು ಕ್ಲಬ್ ಗಳು ರೆಸಾರ್ಟ್ ಸೇರಿದಂತೆ ಮನರಂಜನಾ ತಾಣಗಳು ಅದ್ದೂರಿ ಸಿದ್ಧತೆಯಲ್ಲಿ ತೊಡಗಿವೆ.
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
- ರೌಡಿಗಳ ಜೊತೆ ಸೆಲ್ಫಿ, ಡ್ರಗ್ಸ್ ದಂಧೆಗೆ ಬ್ರೇಕ್
- ಅಥಣಿಯಲ್ಲಿ ಭೀಕರ ಅಪಘಾತ: ಟಿಪ್ಪರ್ ಹರಿದು ವೃದ್ಧ ಸ್ಥಳದಲ್ಲೇ ಸಾವು
ಬಾಲಿವುಡ್ ಮತ್ತು ಸ್ಯಾಂಡಲ್ ವುಡ್ ನ ಖ್ಯಾತನಾಮರ ಸಂಗೀತ ಸಂಜೆ ಸೇರಿದಂತೆ ಹಲವು ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು ಪಾರ್ಟಿ ಆಸಕ್ತರಿಗೆ ವಿಶೇಷ ಆಕರ್ಷಣೆಗಳ ಮೂಲಕ ಸೆಳೆಯಲು ಸಿದ್ಧತೆಗಳನ್ನು ನಡೆಸಲಾಗಿದೆ.
ಇದರ ನಡುವೆ ರೇವ್ ಪಾರ್ಟಿ ಹೆಸರಿನಲ್ಲಿ ಡ್ರಗ್ಸ್ ಪಾರ್ಟಿಗಳು ಕೂಡ ಆಯೋಜನೆಯಾಗುತ್ತಿವೆ ಎಂಬ ಮಾಹಿತಿ ಗುಪ್ತದಳದ ಮೂಲಕ ಪೊಲೀಸರನ್ನು ತಲುಪಿದೆ ಹೀಗಾಗಿ ಬೆಂಗಳೂರಿಗೆ ಸರಬರಾಜಾಗುವ ಮಾದಕ ವಸ್ತುಗಳ ಮೇಲೆ ಪೊಲೀಸರು ತೀವ್ರ ನಿಗಾ ಇಟ್ಟಿದ್ದಾರೆ.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಹೊಸ ವರ್ಷದ ಸಂಭ್ರಮಕ್ಕಾಗಿ ಒಡಿಶಾ ಮತ್ತು ಆಂಧ್ರಪ್ರದೇಶ ರಾಜ್ಯಗಳಿಂದ ಕಡಿಮೆ ಬೆಲೆಗೆ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಆರೋಪಿ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಅವರಿಂದ 3.25 ಕೋಟಿ ರೂ. ಮೌಲ್ಯದ 318 ಕೆಜಿ ಗಾಂಜಾ, ಕಾರು ಹಾಗೂ ಮೂರು ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಜಕ್ಕೂರಿನ ಶ್ರೀರಾಂಪುರದ ರೇಷ್ಮಾ(28), ಜಮೀರ್ ಖಾನ್ (29) ಹಾಗೂ ಕೇರಳದ ಕೊಟ್ಟಾಯಂ ಜಿಲ್ಲೆಯ ಅಚ್ಚು ಸಂತೋಷ್ (28)ಬಂಧಿತ ಆರೋಪಿಗಳಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಗೋವಿಂದಪುರದ ಹೆಚ್ ಬಿಆರ್ ಲೇಔಟ್‍ನಲ್ಲಿ ಬಂಧಿತ ಆರೋಪಿಗಳು ಗಾಂಜಾವನ್ನು ಕಾರಿನಲ್ಲಿಟ್ಟುಕೊಂಡು ಮಾರಾಟ ಮಾಡುತ್ತಿದ್ದ ಖಚಿತವಾದ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಂಡು ಬಂಧಿಸಲಾಗಿದೆ ಎಂದರು.
ಆರೋಪಿಗಳು ಒಡಿಶಾ ಮತ್ತು ಆಂಧ್ರ ರಾಜ್ಯಗಳಿಂದ ಗಾಂಜಾವನ್ನು ಕಡಿಮೆ ಬೆಲೆಗೆ ತಂದು ಹೆಚ್ಚಿನ ಲಾಭಕ್ಕಾಗಿ ಮಾರಾಟ ಮಾಡುತ್ತಿರುವುದನ್ನು ಬಾಯ್ಬಿಟ್ಟಿದ್ದಾರೆ. ಬಂಧಿತರು ಚೀಲಗಳಲ್ಲಿ ತುಂಬಿಟ್ಟಿದ್ದ 318 ಕೆ.ಜಿ ಗಾಂಜಾ, ಕಾರು, 3 ಮೊಬೈಲ್ ಗಳು ಸೇರಿ 3.25 ಕೋಟಿ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಲಾಗಿದೆ ಎಂದರು.


