ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಕಟ್ಟೆಚ್ಚರಕ್ಕೆ ಆದೇಶ

2 years ago

#Mes #blackday #KannadaRajyotsava #Strict #vigilance #ordered #Karnataka #Maharashtra #border

ಬೆಂಗಳೂರು: ಗಡಿ ವಿಚಾರವಾಗಿ ಕುಂದಾನಗರಿ ಬೆಳಗಾವಿಯಲ್ಲಿ ಸದಾ ಒಂದಲ್ಲ ಒಂದು ಕಿತಾಪತಿ ಮಾಡುತ್ತಿರುವ‌ ಎಂ.ಇ.ಎಸ್ ನಿಂದ ಗಡಿಯಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಈ ಹಿನ್ನೆಲೆಯಲ್ಲಿ ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಕಟ್ಟೆಚ್ಚರಕ್ಕೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯೋತ್ಸವದ ಸಮಯದಲ್ಲಿ ಕರಾಳ‌ ದಿನಾಚರಣೆಗೆ ಎಂಇಎಸ್ ಕರೆ ನೀಡಿದೆ. ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ನೀಡುವುದಿಲ್ಲ. ಇಂತಹ ಪ್ರಯತ್ನಗಳನ್ನು ನಿರ್ದಾಕ್ಷಿಣ್ಯವಾಗಿ ಹತ್ತಿಕ್ಕುವಂತೆ ಜಿಲ್ಲಾಡಳಿತ ಮತ್ತು ಪೊಲೀಸರಿಗೆ ಸೂಚನೆ ನೀಡಿರುವುದಾಗಿ ಹೇಳಿದರು.

ಕರಾಳ ದಿನ ಆಚರಣೆ ಹೆಸರಲ್ಲಿ ನೆರೆಯ ಮಹಾರಾಷ್ಟ್ರದಿಂದ ಯಾವುದೇ ನಾಯಕರು ರಾಜ್ಯಕ್ಕೆ ಬಂದು ಪ್ರಚೋದನಕಾರಿ ಭಾಷಣ ಮಾಡಲು ಅವಕಾಶ ನೀಡದಂತೆ ಜಿಲ್ಲಾಡಳಿತಕ್ಕೆ ಸೂಚಿಸಿರುವುದಾಗಿ ತಿಳಿಸಿದರು.

ಮಹಾರಾಷ್ಟ್ರದಲ್ಲಿ ‌ನಡೆಯುತ್ತಿರುವ ಮರಾಠ ಮೀಸಲಾತಿ ಹೋರಾಟದ ಹಿನ್ನೆಲೆಯಲ್ಲಿ ಗಡಿಯಲ್ಲಿ ಹೆಚ್ಚಿನ ಭದ್ರತೆ ಹಾಕಲಾಗಿದೆ. ಶಾಂತಿ, ಸುವ್ಯವಸ್ಥೆ ಕಾಪಾಡಲು ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ರಾಜ್ಯದಿಂದ ಮಹಾರಾಷ್ಟ್ರಕ್ಕೆ ತೆರಳುವ ಸಾರಿಗೆ ಸಂಸ್ಥೆ ಬಸ್ ಸಂಚಾರ ಸ್ಥಗಿತಕ್ಕೆ ಆದೇಶಿಸಲಾಗಿದೆ ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿ, ಮಹಾರಾಷ್ಟ್ರದಲ್ಲಿ ಕೆಎಸ್ಆರ್ ಟಿಸಿ ಬಸ್ ಸುಟ್ಟಿದ್ದು ತಪ್ಪು. ಇದರಿಂದ ಉಭಯ ರಾಜ್ಯಗಳ ಬಾಂಧವ್ಯ ಹದಗೆಡುತ್ತದೆ ಎಂದರು.

ರಾಜ್ಯೋತ್ಸವ ಸಮಯದಲ್ಲಿ ಎಂಇಎಸ್ ಕರಾಳ ದಿನ ಆಚರಣೆಗೆ ಮುಂದಾಗಿರುವುದು ಸರಿಯಾದ ಕ್ರಮವಲ್ಲ ಇದು ತಪ್ಪು. ನಾವು ನಮ್ಮ ರಾಜ್ಯದ ಹಿತ ಕಾಯಲು, ಕನ್ನಡಿಗರ ರಕ್ಷಣೆಗೆ ಬದ್ಧ. ಕರ್ನಾಟಕದಲ್ಲಿರುವ ಜನರು, ಅಲ್ಲಿರುವ ಕನ್ನಡಿಗರ ರಕ್ಷಣೆ ವಿಚಾರದಲ್ಲಿ ನಮ್ಮ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ನಿನ್ನೆ ಮುಖ್ಯಮಂತ್ರಿಗಳು ಕೂಡ ಗೃಹಸಚಿವರು ಹಾಗೂ ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದಾರೆ ಎಂದರು.

Leave a Reply