ಬೆಂಗಳೂರು: ಸಾರಿಗೆ ನಿಗಮದ ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಈಗಾಗಲೇ ಕೆಲವು ಸುತ್ತಿನ ಸಭೆ ನಡೆಸಲಾಗಿದೆ. ಪರಸ್ಪರ ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿದೆ. ನಾಳೆ ಕರೆದಿರುವ ಮುಷ್ಕರವನ್ನು ವಾಪಾಸು ಪಡೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ನಾಳೆ ಸಾರಿಗೆ ನಿಗಮದ ವಿವಿಧ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ನಡೆಸಿದರು.
2016ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ವೇತನ ಪರಿಷ್ಕರಣೆ ಮಾಡಿದ್ದೆ. ಆಗ ಶೇ. 12.5 ರಷ್ಟು ಹೆಚ್ಚಳ ಮಾಡಲಾಗಿತ್ತು. ಬಳಿಕ 2020 ರಲ್ಲಿ ಕೋವಿಡ್ ಕಾರಣಕ್ಕೆ ಅಂದಿನ ಸರ್ಕಾರ ವೇತನ ಪರಿಷ್ಕರಣೆ ಮಾಡಿಲ್ಲ. ದಿನಾಂಕ 2023ರ ಮೇ 01 ರ ಹಿಂದಿನ ಸರ್ಕಾರ ಇದ್ದಾಗ ವೇತನ ಪರಿಷ್ಕರಣೆ ಒಪ್ಪಂದವಾಗಿತ್ತು. ಆಗ ಮೂಲವೇತನ 15 ಶೇಕಡಾ ಪರಿಷ್ಕರಣೆ ಮಾಡಲು ತೀರ್ಮಾನವಾಗಿತ್ತು. ಆಗ ನೀವು ಅದನ್ನು ಒಪ್ಪಿಕೊಂಡಿದ್ದೀರಿ ಎಂದರು.
ವೇತನ ಪರಿಷ್ಕರಣೆ ಕುರಿತಾಗಿ ಶ್ರೀನಿವಾಸ ಮೂರ್ತಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸಮಿತಿ ದಿನಾಂಕ 2022ರ ಜೂನ್ 01 ರಿಂದ 2023ರ ಫೆಬ್ರವರಿ 28ರ ವರೆಗೆ ಬಾಕಿ ವೇತನ ಕೊಡಬಹುದು ಎಂದು ಶಿಫಾರಸು ಮಾಡಿತ್ತು. ಸಾರಿಗೆ ಸಂಘಟನೆಗಳ ಪ್ರತಿನಿಧಿಗಳು ಸಹ ಸಮಿತಿ ಮುಂದೆ ಹಾಜರಾಗಿ ಅಹವಾಲು ಸಲ್ಲಿಸಿದ್ದರು. ಶ್ರೀನಿವಾಸ ಸಮಿತಿಯ ಶಿಫಾರಸ್ಸು ಸರ್ಕಾರ ಒಪ್ಪಿಕೊಂಡಿದೆ. ನೀವು ಸಹ ಸದರಿ ಸಮಿತಿಯ ಶಿಫಾರಸುಗಳನ್ನು ಒಪ್ಪಿಕೊಳ್ಳಬೇಕು ಎಂದು ಮನವಿ ಮಾಡಿದರು.
ಸಮಿತಿಯ ಶಿಫಾರಸು ಆಧಾರದಲ್ಲಿ ಈ ಕುರಿತು ದಿನಾಂಕ 2023ರ ಮಾರ್ಚ್ 01 ರಿಂದ ಜಾರಿಗೆ ಬರುವಂತೆ ಅಂದಿನ ಸರ್ಕಾರ ಅಧಿಸೂಚನೆ ಸಹ ಹೊರಡಿಸಿತ್ತು. ಆದರೆ ಈಗ 38 ತಿಂಗಳ ಬಾಕಿ ವೇತನ ಪಾವತಿಗೆ ಬೇಡಿಕೆ ಇರಿಸಿರುವುದು ಸಮಂಜಸವಲ್ಲ ಎಂದರು.
ನಾವು ಅಧಿಕಾರಕ್ಕೆ ಬಂದಾಗ ಎಲ್ಲಾ ನಿಗಮಗಳಿಗೆ ಒಟ್ಟಾರೆ 4 ಸಾವಿರ ಕೋಟಿ ಸಾಲ ಇತ್ತು. 2018 ರಲ್ಲಿ ಕೇವಲ ರೂ.14 ಕೋಟಿ ಮಾತ್ರ ಬಾಕಿಯಿತ್ತು. ಪ್ರಸ್ತುತ ಯಾವ ಸಾರಿಗೆ ನಿಗಮ ಸಹ ಲಾಭದಲ್ಲಿಲ್ಲ. ಸರ್ಕಾರ ಯಾರಿಗೂ ಅನ್ಯಾಯ ಮಾಡುವುದಿಲ್ಲ. ಎಲ್ಲಾ ನಿಗಮದವರು ಸಹಕರಿಸಬೇಕು ಎಂದು ಕೋರಿದರು.
ಸಾರಿಗೆ ನೌಕರರ ಸಂಘದ ಚುನಾವಣೆ ನಡೆಸುವ ಕುರಿತು ಪರಿಶೀಲನೆ ನಡೆಸಲಾಗುವುದು. ಎಲ್ಲಾ ಅಹವಾಲುಗಳನ್ನು ಮಾತುಕತೆ ಮೂಲಕ ಬಗೆಹರಿಸಲು ಸರ್ಕಾರ ಸಿದ್ಧವಿದೆ ಎಂದರು.
ಸಭೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಸಿಎಂ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್, ಎನ್‌ಡಬ್ಲ್ಯುಕೆಎಸ್‌ಆರ್‌ಟಿಸಿ ಅಧ್ಯಕ್ಷ ರಾಜುಕಾಗೆ, ಸಂಘಟನೆಗಳ ಮುಖಂಡರು ಹಾಜರಿದ್ದರು.




