ಬೆಂಗಳೂರು: ಮಹಿಳೆಯರು ಸಬಲಗೊಂಡಾಗ ಇಡೀ ರಾಷ್ಟ್ರವೇ ಸಬಲಗೊಳ್ಳುತ್ತದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯಮೂರ್ತಿಗಳು ಮತ್ತು ಬೆಂಗಳೂರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ಗೌರವಾನ್ವಿತ ನ್ಯಾಯಮೂರ್ತಿಗಳಾದ ಅನು ಸಿವರಾಮನ್ ಅಭಿಪ್ರಾಯಪಟ್ಟರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಹೊಸೂರು ಮುಖ್ಯ ರಸ್ತೆಯಲ್ಲಿರುವ ಸಾಧಾರಣ ಸಂಸ್ಥೆಗಳ ಸಂರ್ಕೀಣದ ಸಂಭ್ರಮ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ “ಮಹಿಳಾ ಸಬಲೀಕರಣದ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ ಮತ್ತು ಮಹಿಳೆಯರಿಗಾಗಿ ಇರುವ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಪ್ರದರ್ಶನ ಮಳಿಗೆ ಹಾಗೂ ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು ಕಾನೂನು ಅರಿವು ಹೊಂದಿದ್ದಲ್ಲಿ, ತಮ್ಮ ಮೇಲಾಗುವ ದೌರ್ಜನ್ಯಗಳನ್ನು ತಡೆಯಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಗೌರವಾನ್ವಿತ ಜಿಲ್ಲಾ ನ್ಯಾಯಾಧೀಶರಾದ ಹೆಚ್.ಶಶಿಧರ ಶೆಟ್ಟಿ ಹೇಳಿದರು.
ಮಹಿಳೆಯರು ಆಸ್ತಿ ಹಕ್ಕು, ಜನನ-ಮರಣ ನೋಂದಣಿ, ಸೇರಿದಂತೆ ಇತರೆ ಕಾನೂನುಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಮಹಿಳೆಯರ ಸುರಕ್ಷತೆ ಹಾಗೂ ರಕ್ಷಣೆಗಾಗಿ ಹಲವಾರು ಕಾನೂನುಗಳಿದ್ದು, ಅವುಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಹೆಚ್ಚೆಚ್ಚು ಆಗಬೇಕಿದೆ ಎಂದ ಅಭಿಪ್ರಾಯಪಟ್ಟ ಅವರು ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಉಚಿತ ಕಾನೂನು ಸಲಹೆ ನೀಡಲಾಗುತ್ತಿದ್ದು, ಈ ಸೌಲಭ್ಯವನ್ನು ಮಹಿಳೆಯರು ಪಡೆದುಕೊಳ್ಳಬೇಕು ಎಂದು ಕರೆನೀಡಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಮಾತನಾಡಿ, ಸ್ವಾಭಿಮಾನ ಉಳಿಸಿಕೊಳ್ಳಲು ನೊಂದ, ಸಂತ್ರಸ್ತ ಮಹಿಳೆಯರಿಗೆ ಕಾನೂನು ನೆರವು ಅಗತ್ಯ. ಯಾವ ಮಹಿಳೆಯೂ ಕೂಡ ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾಗಬಾರದು. ಅವರ ರಕ್ಷಣೆಗಾಗಿ ಹಲವಾರು ಕಾನೂನುಗಳಿವೆ. ಕಾನೂನು ಸೇವಾ ಪ್ರಾಧಿಕಾರ ಮಹಿಳೆಯರಿಗಾಗಿ ಉಚಿತ ಕಾನೂನು ಸೇವೆಗಳನ್ನು ನೀಡುತ್ತಾ ಬಂದಿದೆ. ಇದನ್ನು ಮಹಿಳೆಯರು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಮಹಿಳೆಯರು ಆರ್ಥಿಕವಾಗಿ ಸಬಲಗೊಂಡರೆ ಆತ್ಮವಿಶ್ವಾಸ ಹಾಗೂ ಧೈರ್ಯದಿಂದ ಯಾವುದೇ ತೊಂದರೆಯನ್ನು ಎದರಿಸಬಲ್ಲರು ಎಂದರು.
ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಯೋಜನೆ ರೂಪಿಸಿ ಅವರನ್ನು ತಮ್ಮ ಮನೆಯ ಯಜನಮಾನಿಯನ್ನಾಗಿಸಿದೆ. ಐದು ವರ್ಷಗಳಲ್ಲಿ ಮನೆಯ ಯಜಮಾನಿ ಲಕ್ಷಾಧಿಪತಿ ಆಗಲಿದ್ದಾಳೆ. ಸರ್ಕಾರ ನೀಡುವ ಹಣವನ್ನು ಉದ್ಯಮಗಳಲ್ಲಿ ತೊಡಗಿಸಿಕೊಂಡು ಮತ್ತಷ್ಟು ಹಣವನ್ನು ಗಳಿಸಿ ಉತ್ತಮ ಗುಣಮಟ್ಟದ ಜೀವನವನ್ನು ತನಗೆ ಹಾಗೂ ತನ್ನ ಕುಟುಂಬಕ್ಕೆ ರೂಪಿಸಿಕೊಳ್ಳಬೇಕೆಂದು ಅವರು ಕರೆನೀಡಿದರು.
ಮಹಿಳೆಯರು ಉದ್ಯಮಿಗಳಾಗಲು ನರ್ಬಾಡ್ ವತಿಯಿಂದ ಹಲವು ಯೋಜನೆಗಳನ್ನು ರೂಪಿಸಿದ್ದು, ಮಹಿಳಾ ಸ್ವ ಸಹಾಯ ಸಂಘಗಳು ಈ ಯೋಜನೆಗಳ ಪ್ರಯೋಜನವನ್ನು ಪಡದುಕೊಂಡು ಮತ್ತಷ್ಟು ಶಕ್ತರಾಗಬೇಕು ಎಂದು ಕಿವಿ ಮಾತು ಹೇಳಿದರು.
ಇದೇ ಸಂದರ್ಭದಲ್ಲಿ ಗಣ್ಯರು ಮಹಿಳೆಯರಿಗಾಗಿ ಇರುವ ಕಲ್ಯಾಣ ಕಾರ್ಯಕ್ರಮಗಳ ಕುರಿತು ಸ್ಥಾಪಿಸಲಾಗಿದ್ದ ಪ್ರದರ್ಶನ ಮಳಿಗೆಗಳಿಗೆ ಭೇಟಿ ನೀಡಿ, ಗರ್ಭಿಣಿ ಮಹಿಳೆಯರ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.
ಸಮಾರಂಭದಲ್ಲಿ ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ನಗರ ಸಿವಿಲ್ ಮತ್ತು ಸತ್ರ ನ್ಯಾಯಾಧೀಶ ಮುರುಳಿಧರ ಪೈ ಬಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಜಿ, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್. ಯತೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಹೇಶ್ ಬಾಬು, ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ವರದರಾಜ್.ಬಿ, ಬೆಂಗಳೂರು ನಗರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಾರದ ಸುಮಂಗಲ ಮಾಳಾಪುರ ಸೇರಿದಂತೆ ಮತ್ತಿತರರು ಹಾಜರಿದ್ದರು.




