ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಆಕ್ರಮಗಳ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪಕ್ಷದ ಶಾಸಕರು ಮತ್ತು ನೂರಾರು ಕಾರ್ಯಕರ್ತರು ಫ್ರೀಡಂ ಪಾರ್ಕ್ ನಲ್ಲಿ ಸಮಾವೇಶಗೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಅಲ್ಲಿಂದ ಮೆರವಣಿಗೆಯಲ್ಲಿ ಹೊರಟ ಪ್ರತಿಭಟನಾಕಾರರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಪ್ರತಿಭಟನಾ ಮೆರವಣಿಗೆ ಸ್ವಲ್ಪ ದೂರ ಸಾಗಿ ಬರುತ್ತಿದ್ದಂತೆ ಮಧ್ಯಪ್ರವೇಶಿಸಿದ ಪೊಲೀಸರು ನಾಯಕರು ಸೇರಿದಂತೆ ಪ್ರತಿಭಟನಾನಿರತರನ್ನು ವಶಕ್ಕೆ ಪಡೆದರು.
ಇವಳೇ ಮಾತನಾಡಿದ ವಿಜಯೇಂದ್ರ ಸಿಎಂ ಸಿದ್ದರಾಮಯ್ಯ ಅವರ ಕಣ್ಣ ಮುಂದೆಯೇ ದೊಡ್ಡ ಪ್ರಮಾಣದ ಅಕ್ರಮ ನಡೆದಿದೆ. ಇದರ ನೈತಿಕ ಹೊಣೆಯನ್ನು ಅವರೇ ಹೊರಬೇಕು ಎಂದರು.
ಕಾಂಗ್ರೆಸ್ ಸರ್ಕಾರದ ಈ ಕರ್ಮಕಾಂಡ ರಾಷ್ಟ್ರಮಟ್ಟದಲ್ಲೂ ಸುದ್ದಿ ಮಾಡಿದೆ. ಮುಖ್ಯಮಂತ್ರಿಗಳ ಕುಟುಂಬಸ್ಥರೇ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ಅಕ್ರಮದಲ್ಲಿ ಶಾಮೀಲಾಗಿದ್ದಾರೆ. ಹೀಗಾಗಿ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೆ ಈ ಹೋರಾಟ ನಿಲ್ಲುವುದಿಲ್ಲ ಎಂದರು.




