ಬೆಂಗಳೂರು: ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಡಾಕ್ಟರ್ ಓದಿದವರು ಇನ್ನೂ ಮೌಡ್ಯ ಬಿಟ್ಟಿಲ್ಲ. ಓದಿದವರೇ ಇನ್ನೂ ಹಣೆಬರಹದಲ್ಲಿ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಬಾಲ್ಯದಿಂದಲೇ ಇಂಥಾ ಮೌಡ್ಯದಲ್ಲಿ ನಂಬಿಕೆ ಇಡಬಾರದು ಎಂದು ಸಿಎಂ ಸಿದ್ದರಾಮಯ್ಯ ಕರೆನೀಡಿದರು.
- ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 25 ಸೀಟು ಕೂಡ ಬರುವುದಿಲ್ಲ: ಆರ್.ಅಶೋಕಬೆಂಗಳೂರು: ವಿಶೇಷ ಅಧಿವೇಶನದಲ್ಲಿ ತಿಪ್ಪೆ ಸಾರಿಸುವ ಕೆಲಸ ಮಾಡಿರುವ ಕಾಂಗ್ರೆಸ್ ಸರ್ಕಾರ ಭಿಕ್ಷುಕರಿಗೆ ನೀಡುವಂತೆ ಪರಿಹಾರ ನೀಡಿದೆ. ಅನ್ನದಾತ ರೈತರಿಗೆ ಅಪಮಾನ ಮಾಡಿ ಭ್ರಮನಿರಸನ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶೇಷ ಅಧಿವೇಶನದಲ್ಲಿ ಸರ್ಕಾರ ರೈತರಿಗೆ ಉತ್ತಮ ಪರಿಹಾರ ನೀಡಲಿದೆ ಅಥವಾ ಸಾಲಮನ್ನಾ ಮಾಡಲಿದೆ ಎಂದುಕೊಂಡಿದ್ದೆವು. ಆದರೆ 2,500 ರೂ. ಪರಿಹಾರ ನೀಡುವ ಮೂಲಕ ಭ್ರಮನಿರಸನವಾಗಿದೆ ಎಂದರು. ಎನ್ಡಿಆರ್ಎಫ್ ಮಾರ್ಗಸೂಚಿ ನೋಡಿದರೆ ಎಕರೆಗೆ 8000 ರೂ. ಪರಿಹಾರ ನೀಡಬೇಕಾಗುತ್ತದೆ.… Read more: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 25 ಸೀಟು ಕೂಡ ಬರುವುದಿಲ್ಲ: ಆರ್.ಅಶೋಕ
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿನಕಲಿ ಔಷಧಿ ತಯಾರಕರು ಮತ್ತು ಮಾರಾಟಗಾರರನ್ನು ದೇಶದ್ರೋಹಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಿ ಲಕ್ಷಾಂತರ ಜನರ ಬದುಕಿನೊಂದಿಗೆ ತಮ್ಮ ಹಣದ ದಾಹವನ್ನ ತೀರಿಸಿಕೊಳ್ಳುತ್ತಿರುವ ನಕಲಿ ಔಷಧಿ ತಯಾರಕರು ಮತ್ತು ಮಾರಾಟಗಾರರನ್ನು ದೇಶದ್ರೋಹಿ ಕಾನೂನಿನ ಅಡಿಯಲ್ಲಿ ಬಂಧಿಸಿ ಶಿಕ್ಷಿಸಬೇಕು. ಇವರು ಮಾಡಿರುವ ಹೀನ ಕೃತ್ಯದಿಂದ ಲಕ್ಷಾಂತರ ರೋಗಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಜನರ ಜೀವಗಳ ಜೊತೆಯಲ್ಲಿ ತಮ್ಮ ಸ್ವಾರ್ಥಕ್ಕಾಗಿ ಮೋಸದ ವ್ಯಾಪಾರವನ್ನು ಮಾಡಿರುವ ಇವರ ಅಪರಾಧ ಅಂತಿಂತಹ ಅಪರಾಧವಲ್ಲ. ನಿಜಕ್ಕೂ ಇವರಿಗೆ ಕಠಿಣ ಶಿಕ್ಷೆಗಳಾಗಬೇಕು. ಹಲವಾರು ಆಸ್ಪತ್ರೆಗಳಲ್ಲಿ ಇರುವ ಮೆಡಿಕಲ್ ಸ್ಟೋರ್… Read more: ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕಬೆಂಗಳೂರು: ರಾಜ್ಯದ ರೈತರು ಭೀಕರ ಬರದಿಂದ ಕಂಗೆಟ್ಟು, ಬೆಳೆ ಕಳೆದುಕೊಂಡು, ಸಾಲದ ಸುಳಿಯಲ್ಲಿ ಸಿಲುಕಿ ಸಂಕಷ್ಟ ಪಡುತ್ತಿರುವ ಸಮಯದಲ್ಲಿ ಮೂರು ದಿನಗಳ ವಿಶೇಷ ಅಧಿವೇಶನ ಕರೆದ ಕಾಂಗ್ರೆಸ್ ಸರ್ಕಾರ ಕೊನೆಗೆ ರೈತರ ಕೈಗೆ ಕೇವಲ ₹2,500 ನೀಡಿದೆ. ಈ ಮೂಲಕ ರೈತರ ಕೈಗೆ ಸರ್ಕಾರ ಚೊಂಬು ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭಾ ಅಧಿವೇಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಬೇಡಿಕೆ ಇಟ್ಟಂತೆ ಪ್ರತಿ ಎಕರೆಗೆ ಪರಿಹಾರ ನೀಡಿಲ್ಲ. ಒಂದು ಕುಟುಂಬಕ್ಕೆ… Read more: ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?ಬೆಂಗಳೂರು: ಯಶವಂತರಾಯಗೌಡ ಪಾಟೀಲ್ ಅವರು ರಾಜೀನಾಮೆಗೆ ಮುಂದಾಗಿದ್ದು ರೈತರ ಬದುಕಿಗಾಗಿಯೇ ಹೊರತು, ಈಶ್ವರಪ್ಪ ಅವರು ಹೇಳಿದ್ದ 15 ಜನರನ್ನು ಕೊಟ್ಟು, ಕೊಳ್ಳುವ ರಾಜೀನಾಮೆ ರೀತಿ ಅಲ್ಲ ಎಂದು ಸಿಎಂ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸಭೆಯಲ್ಲಿ ಬರ ವಿಚಾರ ಕುರಿತ ಚರ್ಚೆ ವೇಳೆ ವಿರೋಧ ಪಕ್ಷಗಳ ನಾಯಕರು ಶಾಸಕ ಯಶವಂತರಾಯಗೌಡ ಪಾಟೀಲ್ ಅವರ ರಾಜೀನಾಮೆ ಪತ್ರದ ಪ್ರತಿಯನ್ನು ಪ್ರದರ್ಶಿಸಿ ಗದ್ದಲ ಎಬ್ಬಿಸಿದಾಗ, ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ವಿರೋಧ ಪಕ್ಷದವರು ಬಹಳ ಆತುರದಲ್ಲಿ ರಾಜಕಾರಣ ಮಾಡಲು… Read more: ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್ಬರ ಪರಿಹಾರಕ್ಕೆ ಕೇಂದ್ರ ಸರ್ಕಾರದ ನೆರವು ಅಗತ್ಯ ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ರೈತರು ಹಾಗೂ ಜನರಿಗೆ ಅಗತ್ಯ ನೆರವು ಒದಗಿಸಲು ರಾಜ್ಯ ಸರ್ಕಾರ ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದೆ. ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ಕೇಂದ್ರ ಸರ್ಕಾರ ಬರ ಘೋಷಣೆಗಿರುವ ನಿಯಮಗಳನ್ನು ಸಡಿಲಿಸಿ ಅಗತ್ಯ ಆರ್ಥಿಕ ನೆರವು ನೀಡಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ವಿಧಾನಸಭೆಯಲ್ಲಿ ತಿಳಿಸಿದರು. ಕೇಂದ್ರ ಸರ್ಕಾರದ ಎನ್ಡಿಆರ್ಎಫ್ ನಿಯಮಗಳನ್ನು ಸಡಿಲಿಸುವಂತೆ ಕೋರಿ ರಾಜ್ಯ… Read more: ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದ ಅವರು, ಸರ್ಕಾರಿ ವಸತಿ ಶಾಲೆಗಳ ಮಕ್ಕಳು ಈ ಬಾರಿ ಶೇ.96 ರಷ್ಟು ಫಲಿತಾಂಶ ಪಡೆದಿದ್ದಾರೆ. ಮುಂದಿನ ಬಾರಿ ಶೇ.100 ರಷ್ಟು ಅಂಕ ಪಡೆಯಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಪ್ರಯತ್ನಗಳು ಸಾಗಲಿ ಎಂದರು.
ದಲಿತ ಸಂಘರ್ಷ ಸಮಿತಿ ರಾಜ್ಯದಲ್ಲಿ ನಡೆಸಿದ, “ನಮಗೆ ಸರಾಯಿ ಅಂಗಡಿ ಬೇಡ, ವಸತಿ ಶಾಲೆ ಬೇಕು” ಎನ್ನುವ ಹೋರಾಟದಿಂದ ಪ್ರೇರಿತನಾಗಿ ಮೊದಲ ಬಜೆಟ್ ಮಂಡಿಸುವ ವೇಳೆ ಗ್ರಾಮೀಣ ಭಾಗದಲ್ಲಿ ಮೊರಾರ್ಜಿ ಶಾಲೆಗಳನ್ನು ಆರಂಭಿಸಿದೆ. ಅವತ್ತಿನಿಂದ ನಿರಂತರವಾಗಿ ಮೊರಾರ್ಜಿ ವಸತಿ ಶಾಲೆಗಳನ್ನು ತೆರೆಯುತ್ತಲೇ ಇದ್ದೇನೆ. ಸದ್ಯ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ 833 ವಸತಿ ಶಾಲೆಗಳಿವೆ. ಅಲ್ಪ ಸಂಖ್ಯಾತ ಇಲಾಖೆಯಡಿಯಲ್ಲಿರುವುದೂ ಸೇರಿ ಒಟ್ಟು 946 ವಸತಿ ಶಾಲೆಗಳಿವೆ ಎಂದು ಮಾಹಿತಿ ನೀಡಿದರು.
ಕೆಲವು ಹೋಬಳಿಯಲ್ಲಿ ಒಂದಕ್ಕಿಂತ ಹೆಚ್ಚು ವಸತಿ ಶಾಲೆಗಳಿವೆ. ಆದ್ದರಿಂದ ಕೆಲವು ಹೋಬಳಿಗಳಲ್ಲಿ ಇಲ್ಲವಾಗಿತ್ತು. ಹೀಗಾಗಿ ಈ ವರ್ಷ 20 ವಸತಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಿದ್ದೇನೆ. ಹೋಬಳಿಗೊಂದು ವಸತಿ ಶಾಲೆ ನನ್ನ ಗುರಿ ಮತ್ತು ಉದ್ದೇಶವಾಗಿದೆ ಎಂದರು.
ಗ್ರಾಮೀಣ ಭಾಗದಲ್ಲಿ ಸರ್ವರಿಗೂ ಗುಣಮಟ್ಟದ ವೈಚಾರಿಕತೆ, ವೈಜ್ಞಾನಿಕತೆಯಿಂದ ಕೂಡಿದ ಶಿಕ್ಷಣ ದೊರೆಯಬೇಕು. ಎಲ್ಲಾ ಜಾತಿ, ವರ್ಗದ ಮಕ್ಕಳಿಗೆ ಓದುವ ಅವಕಾಶ ಕಲ್ಪಿಸಿದ್ದು ನಮ್ಮ ಸಂವಿಧಾನ. ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ. ಇದನ್ನು ಹೋಗಲಾಡಿಸಬೇಕಾಗಿದೆ. ನನಗೆ ಶಿಕ್ಷಣ ಸಿಕ್ಕಿದ್ದರಿಂದಲೇ ಮುಖ್ಯಮಂತ್ರಿ ಆಗುವ ಅವಕಾಶ ದೊರೆಯಿತು. ಇಲ್ಲದಿದ್ದರೆ ನಾನೂ ಎಮ್ಮೆ, ಹಸು ಮೇಯಿಸುತ್ತಾ ಅಷ್ಟಕ್ಕೇ ಸೀಮಿತ ಆಗಬೇಕಾಗಿತ್ತು ಎಂದರು.
ಬುದ್ದ, ಬಸವಣ್ಣ ಎಂಟು ಶತಮಾನಗಳ ಹಿಂದೆ ಜಾತಿ ವ್ಯವಸ್ಥೆ ಅಳಿಸಲು ಶ್ರಮಿಸಿದರು. ಆದರೆ ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ ಎಂಬುದು ವಿಪರ್ಯಾಸ. ಮಕ್ಕಳಿಗೆ ಜಾತಿ, ಧರ್ಮದ ತಾರತಮ್ಯ ಕಲಿಸುವವರೇ ನಾವು. ಆದ್ದರಿಂದ ಪೋಷಕರು, ಶಿಕ್ಷಕರು ಮೊದಲು ಕಂದಾಚಾರ, ಮೌಡ್ಯದಿಂದ ಹೊರಗೆ ಬರಬೇಕು. ಆಗ ಮಕ್ಕಳೂ ವೈಜ್ಞಾನಿಕವಾಗಿ ಬೆಳೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳುತ್ತಾರೆ ಎಂದರು.
ಹುಟ್ಟುವಾಗ ಎಲ್ಲಾ ಮಕ್ಕಳೂ ವಿಶ್ವ ಮಾನವರಾಗಿ ಹುಟ್ಟಿ ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ ಎನ್ನುವ ಕುವೆಂಪು ಅವರ ಮಾತು ಇಂದಿಗೂ ಸತ್ಯವಾಗಿದೆ. ಮಕ್ಕಳು ಅಲ್ಪ ಮಾನವರಾಗದಂತೆ ಕಾಪಾಡುವ ಜವಾಬ್ದಾರಿ ಶಿಕ್ಷಕರು, ಪೋಷಕರ ಮೇಲಿದೆ ಎಂದರು.
ಬಸವಣ್ಣನವರು 12ನೇ ಶತಮಾನದಲ್ಲೇ ದಲಿತರು ಮತ್ತು ಬ್ರಾಹ್ಮಣರ ನಡುವೆ ಅಂತರ್ಜಾತಿ ವಿವಾಹ ಮಾಡಿಸಿ ಗೆದ್ದರು. ಜಾತಿ ವ್ಯವಸ್ಥೆ ಶಿಥಿಲವಾಗಬೇಕಾದರೆ ದಲಿತರು, ಹಿಂದುಳಿದವರಿಗೆ ಆರ್ಥಿಕ ಶಕ್ತಿ ಬರಬೇಕು, ಸಾಮಾಜಿಕವಾಗಿಯೂ ಶಕ್ತಿ ಬರಬೇಕು. ಈ ಬಗ್ಗೆ ಅಂಬೇಡ್ಕರ್ ಅವರು ಸಂವಿಧಾನ ಸಭೆಯಲ್ಲಿ ಆಡಿದ ಮಾತುಗಳು ಇವತ್ತಿಗೂ ಬಹಳ ಪ್ರಸ್ತುತವಾಗಿದೆ ಎಂದರು.
ಹಿಂದೆ ಮುಂದುವರೆದ ಜಾತಿಯ ಹೆಣ್ಣು ಮಕ್ಕಳಿಗೂ ಶಿಕ್ಷಣ ಕಲಿಯುವ ಅವಕಾಶ ಇರಲಿಲ್ಲ. ಎಲ್ಲಾ ಜಾತಿಯ ಹೆಣ್ಣುಮಕ್ಕಳೂ ಶಿಕ್ಷಣದ ವಿಚಾರದಲ್ಲಿ ಶೋಷಿತರಾಗಿದ್ದವರೇ. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಮುಂದಿರುವುದು ನೋಡಿದರೆ ಖುಷಿ ಆಗುತ್ತದೆ. ಇದಕ್ಕೆ ಕಾರಣವಾದ ನಮ್ಮ ಸಂವಿಧಾನಕ್ಕೆ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕೋಟಿ ಪ್ರಣಾಮಗಳು ಎಂದರು.




