ತೃತೀಯ ಭಾಷೆಗೆ ಇನ್ಮುಂದೆ  ‘ಪಾಸ್-ಫೇಲ್’ ಎಂಬ ಆತಂಕ ವಿದ್ಯಾರ್ಥಿಗಳಿಗೆ ಇರುವುದಿಲ್ಲ: ಮಧು ಬಂಗಾರಪ್ಪ

6 months ago

ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ…!
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರಗಳು!

​ರಾಜ್ಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಒತ್ತಡವನ್ನು ತಗ್ಗಿಸಲು ಮತ್ತು ಪರೀಕ್ಷಾ ಭಯದಿಂದ ಮುಕ್ತಗೊಳಿಸಲು ನಮ್ಮ ಸರ್ಕಾರ ಇಂದು ಐತಿಹಾಸಿಕ ನಿರ್ಧಾರಗಳನ್ನು ಪ್ರಕಟಿಸಿದೆ.

​ತೃತೀಯ ಭಾಷೆ ಇನ್ಮುಂದೆ ‘ಗ್ರೇಡಿಂಗ್’ ಮಾತ್ರ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ (ಹಿಂದಿ, ಸಂಸ್ಕೃತ, ಉರ್ದು ಸೇರಿದಂತೆ) ಅಂಕಗಳ ಬದಲಿಗೆ ‘ಗ್ರೇಡ್’ ವ್ಯವಸ್ಥೆ ಜಾರಿಗೆ ತರಲಾಗುವುದು. ಇದರಿಂದ ಈ ವಿಷಯದಲ್ಲಿ ‘ಪಾಸ್-ಫೇಲ್’ ಎಂಬ ಆತಂಕ ವಿದ್ಯಾರ್ಥಿಗಳಿಗೆ ಇರುವುದಿಲ್ಲ.

ನೈತಿಕ ಶಿಕ್ಷಣಕ್ಕೆ ಆದ್ಯತೆ: ಮಕ್ಕಳನ್ನು ಸುಸಂಸ್ಕೃತ ಪ್ರಜೆಗಳನ್ನಾಗಿ ರೂಪಿಸಲು ಪ್ರಸಕ್ತ ಸಾಲಿನಿಂದಲೇ ‘ನೈತಿಕ ಶಿಕ್ಷಣ’ (Moral Science) ಪಠ್ಯವನ್ನು ಜಾರಿಗೆ ತರಲಾಗುತ್ತಿದೆ. ಸರ್ಕಾರದಿಂದಲೇ ಉಚಿತ ಪುಸ್ತಕಗಳ ವಿತರಣೆ ನಡೆಯಲಿದೆ.

ಮಕ್ಕಳ ಡಿಜಿಟಲ್ ಸುರಕ್ಷತೆ: 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆಯ ನಿರ್ಬಂಧದ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ ನಡೆದಿದ್ದು, ಪೋಷಕರು ಈ ಬಗ್ಗೆ ಜಾಗೃತೆ ವಹಿಸಬೇಕೆಂದು ನನ್ನ ಕಳಕಳಿಯ ವಿನಂತಿ.

​ನಮ್ಮ ಗುರಿ: ಒತ್ತಡ ಮುಕ್ತ ಶಿಕ್ಷಣ, ಮೌಲ್ಯಯುತ ಭವಿಷ್ಯ.

– ಮಧು ಬಂಗಾರಪ್ಪ, ಶಿಕ್ಷಣ ಸಚಿವ

Leave a Reply