ದಾವಣಗೆರೆ: ಕೇಂದ್ರೀಯ ಸೈನಿಕ ಮಂಡಳಿಯಿಂದ ಪಡೆಯುತ್ತಿರುವ ಅಂಗವಿಕಲ ಮಕ್ಕಳ ಅನುದಾನ ಹಾಗೂ ಅನಾಥ ಮಕ್ಕಳ ಅನುದಾನಕ್ಕಾಗಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಪ್ರಸಕ್ತ ಸಾಲಿನ ಅನುದಾನ ನವೀಕರಣಕ್ಕಾಗಿ ಜೀವಿತ ಪ್ರಮಾಣ ಪತ್ರವನ್ನು ಡಿ.1 ರಿಂದ ಮಾರ್ಚ್ 2025 ರೊಳಗಾಗಿ ಸಲ್ಲಿಸಬೇಕು.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಜೀವಿತ ಪ್ರಮಾಣ ಪತ್ರವನ್ನು ಸಲ್ಲಿಸಲು ಮೂಲ ದಾಖಲೆಗಳೊಂದಿಗೆ ಸಂಬಂಧಿತ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ HTTPS://ONLINE.KSB.GOV.IN ನ್ನು ಅಥವಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಶಿವಮೊಗ್ಗ ದೂ.ಸಂ:08182-220925 ನ್ನು ಸಂಪರ್ಕಿಸಲು ಇಲಾಖೆಯ ಉಪ ನಿರ್ದೇಶಕ ಡಾ.ಸಿ.ಎ ಹಿರೇಮಠ ತಿಳಿಸಿದ್ದಾರೆ.



