ಬೆಂಗಳೂರು: ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧಿಯಾಗಿ ಜೈಲಿನಲ್ಲಿರುವ ಚಿತ್ರದುರ್ಗದ ರೇಣುಕಾ ಸ್ವಾಮಿ ಹಾಸ್ಯ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಕೆಯಾಗುತ್ತಿದೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಪ್ರಕರಣದ ತನಿಖೆ ನಡೆಸಿದ ಪೊಲೀಸರು ದಾಖಲೆ ಅವಧಿಯಲ್ಲಿ ಇಡೀ ಪ್ರಕರಣ ತನಿಖೆ ಪೂರ್ಣಗೊಳಿಸಿ ಆರೋಪ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ ಇದನ್ನು 2-3 ಬಾರಿ ಕಾನೂನು ತಜ್ಞರಿಂದ ಪರಿಶೀಲನೆ ನಡೆಸಿ ಎಲ್ಲಾ ರೀತಿಯಲ್ಲಿ ಪರಾಮರ್ಶೆ ನಡೆಸಿ ಆರೋಪಿಗಳ ಹೇಳಿಕೆ ಸಾಕ್ಷಾಧಾರಗಳ ಲಗತ್ತಿನೊಂದಿಗೆ ಚಾರ್ಜ್ಶೀಟ್ ಸಿದ್ದಪಡಿಸಲಾಗಿದೆ.
ಕೊಲೆ ಸಂಬಂಧ ಮೌಖಿಕ, ಸಾಂಧರ್ಭಿಕ ಮತ್ತು ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ ಅವುಗಳನ್ನು ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಿ ಅಲ್ಲಿಂದ ಬಂದ ವರದಿಗಳನ್ನು ಆರೋಪಪಟ್ಟಿಯಲ್ಲಿ ಸೇರಿಸಲಾಗಿದೆ.
ಗ್ಯಾಜೆಟ್ ಅಥವಾ ಎಲೆಕ್ಟ್ರಾನಿಕ್ ಉಪಕರಣಗಳ ಸಾಕ್ಷ್ಯಗಳನ್ನು ಹೈದರಾಬಾದ್ ಎಫ್ಎಸ್ಎಲ್ ಗೆ ಕಳಿಸಲಾಗಿದ್ದು ಅಲ್ಲಿಂದ ವರದಿಗಳು, ಎಲ್ಲಾ ವರದಿಗಳು ಪ್ರಾಪ್ತವಾದ ಬಳಿಕ ಮತ್ತೊಮ್ಮೆ ಸಾಕ್ಷಿಗಳಿಂದ ಸ್ಪಷ್ಟೀಕರಣ ಪಡೆದು ಅದನ್ನು ಚಾರ್ಜ್ಶೀಟ್ ನಲ್ಲಿ ಸೇರಿಸಿ ಸಲ್ಲಿಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ಹೇಳಿದರು.
ರೇಣುಕಾ ಸ್ವಾಮಿಯ ಕೊಲೆ ಕಳೆದ ಜೂನ್ 9 ರಂದು ನಡೆದಿತ್ತು. ಜೂನ್ 10 ರಂದು ರೇಣುಕಾ ಸ್ವಾಮಿಯ ಮೃತದೇಹ ಪತ್ತೆಯಾಗಿತ್ತು. ಅದೇ ದಿನ ಮೂವರು ಅನಾಮಿಕರು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡು ಠಾಣೆಯಲ್ಲಿ ಶರಣಾಗಿದ್ದರು. ಆದರೆ ಅನುಮಾನ ಬಂದ ಪೊಲೀಸರು ಅವರ ವಿಚಾರಣೆ ನಡೆಸಿದಾಗ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರರು ಭಾಗಿಯಾಗಿರುವುದು ಗೊತ್ತಾಗಿತ್ತು. ಜೂನ್ 11 ರಂದು ಬೆಳಿಗ್ಗೆ ಮೈಸೂರಿನಲ್ಲಿ ನಟ ದರ್ಶನ್ ಅನ್ನು, ಬೆಂಗಳೂರಿನಲ್ಲಿ ಪವಿತ್ರಾ ಗೌಡ ಹಾಗೂ ದರ್ಶನ್ರ ಕೆಲವು ಸಹಚರರನ್ನು ಬಂಧಿಸಲಾಗಿತ್ತು ಎಂದು ಹೇಳಿದರು.
ಬಹುತೇಕ ಪ್ರಕರಣದಲ್ಲಿ ಚಾರ್ಜ್‌ಶೀಟ್‌ನಲ್ಲಿರುವ ಲೋಪ ವಿಚಾರವನ್ನು ವಕೀಲರು ಪ್ರಸ್ತಾಪ ಮಾಡಿ ಆರೋಪಿಗಳನ್ನು ಪಾರು ಮಾಡುತ್ತಾರೆ. ಈ ಕಾರಣಕ್ಕೆ ಕಾನೂನು ತಜ್ಞರಿಂದ ಸಲಹೆ ಪಡೆದು ಆರೋಪ ಪಟ್ಟಿ ಸಿದ್ಧಪಡಿಸಲಾಗಿದೆ ಎಂದರು.
ತಮ್ಮ ಗೆಳತಿ ಪವಿತ್ರ ಗೌಡ ಅವರಿಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸುತ್ತಾರೆ ಎಂದು ಕೋಪಗೊಂಡ ದರ್ಶನ್ ತನ್ನ ಸಹಚರರ ಮೂಲಕ ಆತನನ್ನು ಚಿತ್ರದುರ್ಗದಿಂದ ಅಪಹರಿಸಿ ಬೆಂಗಳೂರಿನ ಪಟ್ಟಣಗೆರೆಯಲ್ಲಿರುವ ಶೆಡ್‌ವೊಂದರಲ್ಲಿ ಕೂಡಿಹಾಕಿ ಅಮಾನುಷವಾಗಿ ಹಲ್ಲೆ ಮಾಡಿ ಹತ್ಯೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ.




