ಬೆಂಗಳೂರು: ರಾಜ್ಯದಲ್ಲಿ ಲೋಕಸಭೆಗೆ ಮೊದಲ ಹಂತದಲ್ಲಿ ಏ.26 ರಂದು ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಭರಾಟೆಯಿಂದ ನಡೆದಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಚುನಾವಣೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್, ಜೆಡಿಎಸ್ – ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ಹಾಗೂ ಪಕ್ಷೇತರರು ಸೇರಿದಂತೆ ಈವರೆಗೆ 60 ಕ್ಕೂ ಹೆಚ್ಚು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಹೈ ವೋಲ್ಟೇಜ್ ಕ್ಷೇತ್ರವಾಗಿ ಪರಿಣಮಿಸಿರುವ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮೊಮ್ಮಗ ಪ್ರಜ್ವಲ್ ರೇವಣ್ಣ ಅಬ್ಬರ ಆರ್ಭಟವಿಲ್ಲದೆ ಸರಳವಾಗಿ ನಾಮಪತ್ರ ಸಲ್ಲಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ನಾಯಕರೊಂದಿಗೆ ಭರ್ಜರಿ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿದರು.
ಮತ್ತೊಂದೆಡೆ, ಹೈ-ಹೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣ ಗೌಡ (ಸ್ಟಾರ್ ಚಂದ್ರು) ನಾಮಪತ್ರ ಸಲ್ಲಿಸಿದರು. ಮಂಡ್ಯದ ಕಾಳಿಕಾಂಬದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಭಾರಿ ಮೆರಣಿಗೆ ಮೂಲಕ ಆಗಮಿಸಿ ಜಿಲ್ಲಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ ಇವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯ ಸ್ವಾಮಿ, ಎಐಸಿಸಿ ಕಾರ್ಯದರ್ಶಿ ರೋಜಿ ಎಮ್ಜಾನ್ ಹಾಗೂ ಪಕ್ಷದ ಶಾಸಕರು ಸಾಥ್ ನೀಡಿದರು.
ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸೌಮ್ಯಾ ರೆಡ್ಡಿ ಅವರು ಡಿ.ಕೆ. ಶಿವಕುಮಾರ್, ರಾಮಲಿಂಗಾರೆಡ್ಡಿ, ಸೇರಿದಂತೆ ಅಪಾರ ಬೆಂಬಲಿಗರೊಂದಿಗೆ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿದರು.
ಬೆಂಗಳೂರು ಕೇಂದ್ರ ಲೋಕ ಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಬನ್ನಪ್ಪ ಪಾರ್ಕ್ ಉದ್ಯಾನವನದಲ್ಲಿ ಬೃಹತ್ ಸಮಾವೇಶ ನಂತರ ಜಾಥಾ ಮೂಲಕ, ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಗಾಲಿಜನಾರ್ದನ ರೆಡ್ಡಿ ಸೇರಿದಂತೆ ಪ್ರಮುಖರು ಇವರಿಗೆ ಸಾಥ್ ನೀಡಿದರು.




