ಬೆಂಗಳೂರು: ರಾಜ್ಯದ ಹಲವೆಡೆ ಅತಿವೃಷ್ಟಿಯಿಂದ ಹಾನಿಗೊಳಗಾದ ರೈತರ ಸಂಕಷ್ಟಕ್ಕೆ ಸ್ಪಂದಿಸಿದ ರಾಜ್ಯ ಸರ್ಕಾರ ರೈತರಿಗೆ ಹೆಚ್ಚುವರಿಯಾಗಿ ರೂ.1033.60 ಕೋಟಿ ಇನ್ಪುಟ್ ಸಬ್ಸಿಡಿ ವಿತರಿಸಿದೆ. ರೈತರ ಖಾತೆಗಳಿಗೆ ಇನ್ ಪುಟ್ ಸಬ್ಸಿಡಿ ವಿತರಣೆಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರ ರೈತರ ಪರವಾಗಿದ್ದು, ಬೆಳೆ ಹಾನಿಗೊಳಗಾದ ರೈತರಿಗೆ ಹೆಚ್ಚಿನ ನೆರವು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಇನ್ಪುಟ್ ಸಬ್ಸಿಡಿಗಳ ದರಗಳನ್ನು ಹೆಚ್ಚಿಸಿದೆ ಎಂದರು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಗರಿಷ್ಠ 2 ಹೆಕ್ಟೇರ್ ಗೆ ಸೀಮಿತವಾಗಿ, ಮಳೆಯಾಶ್ರಿತ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ. 8500 ರಿಂದ ರೂ. 17 ಸಾವಿರ, ನೀರಾವರಿ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ.17 ಸಾವಿರದಿಂದ ರೂ.25,500 ಹಾಗೂ ಬಹು ವಾರ್ಷಿಕ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ.22,500ರಿಂದ ರೂ. 31 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದರು.
ರಾಜ್ಯ ಪ್ರಾಕೃತಿಕ ವಿಕೋಪ ಪರಿಹಾರ ಮಾನದಂಡಗಳ ಪ್ರಕಾರ 14.24 ಲಕ್ಷ ರೈತರಿಗೆ ಇನ್ಪುಟ್ ಸಬ್ಸಿಡಿಯಾಗಿ ಈಗಾಗಲೇ ರೂ. 1218.03 ಕೋಟಿ ವಿತರಿಸಲಾಗಿದೆ. ಇದರ ಜೊತೆಗೆ ರಾಜ್ಯ ನಿಧಿಯಿಂದ ರೂ. 1033.60 ಕೋಟಿಯನ್ನು ಟಾಪ್ ಅಪ್ ರೂಪದಲ್ಲಿ ಹೆಚ್ಚುವರಿಯಾಗಿ ನೀಡಲಾಗುತ್ತಿದೆ ಎಂದರು.
ಒಟ್ಟಾರೆಯಾಗಿ ಪರಿಹಾರ ಪಾವತಿ ಪ್ರಕ್ರಿಯೆಯಲ್ಲಿರುವ ಪಾವತಿಗಳನ್ನು ಒಳಗೊಂಡಂತೆ ರೂ.2251.63 ಕೋಟಿ ಯನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಆಗಲಿದೆ ಎಂದು ವಿವರಿಸಿದರುಮುಂಗಾರು ಅವಧಿಯಲ್ಲಿ ದಾಖಲೆಯ 82.56 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಆದರೆ ಜೂನ್ ನಿಂದ ಸೆಪ್ಟಂಬರ್ ಅವಧಿಯಲ್ಲಿ ಉಂಟಾದ ಅತಿವೃಷ್ಟಿಯಿಂದಾಗಿ 14.58 ಲಕ್ಷ ಹೆಕ್ಟೇರ್ ಗಿಂತ ಹೆಚ್ಚಿನ ಪ್ರದೇಶದ ಬೆಳೆ ಹಾನಿ ಉಂಟಾಗಿದ್ದು, ಇದರಿಂದ ಅಂದಾಜು ರೂ.10,748 ಕೋಟಿ ಬೆಳೆ ಹಾನಿ ಅಂದಾಜಿಸಲಾಗಿದೆ ಎಂದರು.
ಮುಖ್ಯವಾಗಿ ತೊಗರಿ ಬೇಳೆ 5.36 ಲಕ್ಷ ಹೆಕ್ಟೇರ್, ಹೆಸರು ಕಾಳು 2.63 ಲಕ್ಷ ಹೆಕ್ಟೇರ್, ಹತ್ತಿ 2.68 ಲಕ್ಷ ಹೆಕ್ಟೇರ್ ಮತ್ತು ಮೆಕ್ಕೆಜೋಳ 1.21 ಲಕ್ಷ ಹೆಕ್ಟೇರ್ ಹಾನಿ ಉಂಟಾಗಿದೆ ಎಂದು ಹೇಳಿದರುಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಬೆಳೆಗಳು ಕೊಯ್ಲಿನ ಹಂತಕ್ಕೆ ಬಂದ ಸಂದರ್ಭದಲ್ಲಿ ಭಾರೀ ಮಳೆಯಿಂದ ಹೆಚ್ಚಿನ ಹಾನಿ ಸಂಭವಿಸಿದೆ ಎಂದರು.
ಕೃಷ್ಣಾ ಮತ್ತು ಭೀಮಾ ಜಲಾನಯನ ಪ್ರದೇಶಗಳಲ್ಲಿ ನಿರಂತರ ಒಳ ಹರಿವು ಹೆಚ್ಚಳದಿಂದ ಕಲಬುರಗಿ, ಯಾದಗಿರಿ ಮತ್ತು ಬೀದರ ಜಿಲ್ಲೆಗಳಲ್ಲಿ ತೊಗರಿ ಮತ್ತು ಹತ್ತಿ ಬೆಳೆಗಳಿಗೆ ವ್ಯಾಪಕ ಹಾನಿ ಉಂಟಾಗಿದೆ. ಬೆಳೆ ಹಾನಿಯನ್ನು ನಿಖರವಾಗಿ ಖಚಿತಪಡಿಸಲು ಜಂಟಿ ಸಮೀಕ್ಷೆ ನಡೆಸಿ ಹಾನಿಯನ್ನು ಅಂದಾಜಿಸಲಾಗಿದೆ. ಎಲ್ಲಾ ದತ್ತಾಂಶಗಳನ್ನು ಪರಿಹಾರ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಭೂಮಿ ಮತ್ತು ಫ್ರೂಟ್ಸ್ ತಂತ್ರಾಂಶದಲ್ಲಿ ಸಂಯೋಜಿಸಲಾಗಿದೆ ಎಂದರು.




