ಮಂಡ್ಯ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಮೈಸೂರಿಗೆ ತೆರಳುವ ಮುನ್ನ ಮದ್ದೂರು ತಾಲೂಕು ಕಚೇರಿ ಹಾಗೂ ಉಪ ನೋಂದಣಾಧಿಕಾರಿಗಳ ಕಚೇರಿಗೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಅವರು ಭೇಟಿ ನೀಡಿದಾಗ ಮದ್ದೂರು ತಹಶೀಲ್ದಾರ್ ಕಚೇರಿಯಲ್ಲಿ ಇ-ಆಫೀಸ್ ಅನುಷ್ಠಾನವೇ ಆಗಿರಲಿಲ್ಲ. ಇನ್ನೂ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ದಲ್ಲಾಳಿಗಳ ಮೂಲಕ ಲಂಚಕ್ಕೆ ಬೇಡಿಕೆ ಇಡುತ್ತಿರುವ ಬಗ್ಗೆ ಜನರಿಂದಲೇ ದೂರು ಬಂದಿತ್ತು. ಹೀಗಾಗಿ ಅಧಿಕಾರಿಗಳನ್ನು ಕೃಷ್ಣ ಬೈರೇಗೌಡ ಸ್ಥಳದಲ್ಲಿಯೇ ತೀವ್ರ ತರಾಟೆಗೆ ತೆಗೆದುಕೊಂಡರು.




