ಬೆಂಗಳೂರು: ದಿನಾಂಕ 6.7.2021ರಂದು ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರೊಂದಿಗೆ ಕೋವಿಡ್ ಪರಿಸ್ಥಿತಿ ಪರಾಮರ್ಶಿಸಲು ಹನ್ನೊಂದು ರಾಜ್ಯಗಳ ಆರೋಗ್ಯ ಸಚಿವರ ಜತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡರು.

ಈ ವೇಳೆ ಸಚಿವ ರಹಿಂದಿನ ಬೋರ್ಡ್ ನಲ್ಲಿ ಹಿಂದಿ ಮತ್ತುಇಂಗ್ಲಿಷ್ ಭಾಷೆಗೆ ಪ್ರಾಧಾನ್ಯತೆ ಕೊಟ್ಟು, ಕನ್ನಡವನ್ನು ಕಡೆಗಣಿಸಲಾಗಿತ್ತು. ಏಕೆಂದರೆ, ವಿಕಾಸಸೌಧದ ಮೊದಲ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 117ರಲ್ಲಿ ನಡೆದ ಸಂವಾದದ ವೇಳೆ, ಬೋರ್ಡ್ ನಲ್ಲಿ ವಿಕಾಸಸೌಧ ಎಂಬ ವಾಕ್ಯ ಮಾತ್ರ ಕನ್ನಡದಲ್ಲಿದೆ. ಉಳಿದಂತೆ, ಕರ್ನಾಟಕವನ್ನು ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಮಾತ್ರ ಬರೆಯಲಾಗಿತ್ತು. ಈ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಜಾಲತಾಣಿಗರು ಮತ್ತು ಕನ್ನಡ ಪ್ರೇಮಿಗಳು ಕನ್ನಡವನ್ನು ಕಡೆಗಣಿಸಲಾಗಿದೆ ಎಂದು ಕಿಡಿಕಾರಿದ್ದಾರೆ.




