ಬೆಂಗಳೂರು: ಬೆಳಗಾವಿ, ಬಾಗಲಕೋಟೆ ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ನುರಿಸುವ ಕಾರ್ಯ ಆರಂಭವಾಗುತ್ತಿದ್ದು, ಕಬ್ಬು ಕಟಾವಿಗೆ ಅನುಮತಿ ನೀಡಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಸಕ್ಕರೆ ಮತ್ತು ಜವಳಿ ಸಚಿವ ಶಿವಾನಂದ ಪಾಟೀಲ್, ಈ ಮೊದಲು ನವೆಂಬರ್ 15 ರಿಂದ ಕಬ್ಬು ನುರಿಸುವ ಕಾರ್ಯ ಆರಂಭಿಸಲು ತೀರ್ಮಾನಿಸಲಾಗಿತ್ತು. ಆದರೆ ಸಕ್ಕರೆ ಕಾರ್ಖಾನೆಳಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಒಂದು ವಾರ ಮೊದಲೇ ಕಬ್ಬು ನುರಿಸುವ ಕಾರ್ಯ ಆರಂಭವಾಗಲಿದೆ ಎಂದರು.
ಈ ಬಾರಿ ಸಕ್ಕರೆಗೆ ಉತ್ತಮ ಬೇಡಿಕೆ ಇದೆ. ಜೊತೆಗೆ ಕಬ್ಬು ಇಳುವರಿ ಕೂಡ ಚೆನ್ನಾಗಿದೆ. ಈ ಹಿನ್ನೆಲೆಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರ ಒತ್ತಾಯದಂತೆ ಅವಧಿಗೆ ಮೊದಲೇ ಕಬ್ಬು ನುರಿಸುವ ಕಾರ್ಯ ಆರಂಭವಾಗುತ್ತಿದೆ ಎಂದರು.
ರಾಜ್ಯದಲ್ಲಿ ಆರು ಲಕ್ಷ ಹೆಕ್ಟೇರ್ ಕಬ್ಬು ಕಟಾವಿಗೆ ಸಿದ್ಧವಿದ್ದು, ಎಂಬತ್ತು ಕಾರ್ಖಾನೆಗಳು ಕಬ್ಬು ಅರೆಯಲಿವೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಮೂರು ತಿಂಗಳ ಹಿಂದೆಯೇ ಆರಂಭಿಸಲಾಗಿದೆ. ಈ ವರ್ಷ ಪ್ರತಿ ಟನ್ ಕಬ್ಬಿಗೆ 3,400 ರೂ. ಬೆಲೆ ಘೋಷಣೆ ಮಾಡಲಾಗಿದೆ. ಕಳೆದ ವರ್ಷ 3,150 ಇತ್ತು ಎಂದರು.
ಬೆಂಬಲ ಬೆಲೆಯಲ್ಲಿ ಹೆಸರು ಕಾಳು ಖರೀದಿ ಪ್ರಕ್ರಿಯೆ ಮುಗಿದಿತ್ತು. ಈಗ ಮತ್ತೆ ಅದನ್ನು ವಿಸ್ತರಿಸಿ, 32 ಸಾವಿರ ಮೆಟ್ರಿಕ್ ಟನ್ ಖರೀದಿವರೆಗೆ ಹೆಚ್ಚಳ ಮಾಡಲಾಗಿದೆ. ಅದರ ಜೊತೆಗೆ ಸೋಯಾಬಿನ್ ಖರೀದಿ ಸಹ ವಿಸ್ತರಿಸಲಾಗಿದೆ. ದರ ಕುಸಿತವಾದಾಗಲೆಲ್ಲ ಬೆಳೆಗೆ ಬೆಂಬಲ ಬೆಲೆ ಘೋಷಿಸಿ ಎಪಿಎಂಸಿಯಲ್ಲಿ ಖರೀದಿಸಲಾಗುತ್ತಿದೆ. ಇದೇ ಮೊದಲ ಬಾರಿಗೆ ಸೋಯಾಬಿನ್, ಹೆಸರು, ಸೂರ್ಯಕಾಂತಿ ಮತ್ತು ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸಿ, ಏಕಕಾಲದಲ್ಲಿ ಖರೀದಿಸಲಾಗಿದೆ. ಎಪಿಎಂಸಿ ಕಾಯ್ದೆ ಹಿಂಪಡೆದ ಕಾರಣ ರಾಜ್ಯದ 166 ಎಪಿಎಂಸಿಗಳು 200 ಕೋಟಿ ಲಾಭಗಳಿಸಿವೆ ಎಂದರು.




