ಸಂಕ್ರಾಂತಿ ಹಬ್ಬದ ಪ್ರಯುಕ್ತ 10000 ಜನ ಮತ್ತು ಪೌರ ಕಾರ್ಮಿಕ ಮಹಿಳೆಯರಿಗೆ ಕಬ್ಬು, ಎಳ್ಳು, ಬೆಲ್ಲ ವಿತರಣೆ
ಬೆಂಗಳೂರು: ಜಯನಗರದ ತಿಲಕ್ ನಗರ ವಾರ್ಡ್ ಎಲ್.ಐ.ಸಿ. ಕಾಲೋನಿಯಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಹತ್ತು ಸಾವಿರ ಸಾರ್ವಜನಿಕರು ಮತ್ತು ಪೌರ ಕಾರ್ಮಿಕರಿಗೆ ಎಳ್ಳು-ಬೆಲ್ಲ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು .
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಜಯನಗರ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎನ್.ನಾಗರಾಜು ಗೋಪೂಜೆ ಸಲ್ಲಿಸಿ ಕಬ್ಬು, ಎಳ್ಳು ವಿತರಿಸಿದರು. ಇದೇ ವೇಳೆ ಮಾತನಾಡಿದ ಅವರು, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿರವರ ಮಾರ್ಗದರ್ಶನ ಮತ್ತು ಕೆಪಿಸಿಸಿ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿರವರ ನೇತೃತ್ವದಲ್ಲಿ ಪ್ರತಿ ವರ್ಷ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕಬ್ಬು, ಎಳ್ಳು ಬೆಲ್ಲವನ್ನು ಸಾರ್ವಜನಿಕರಿಗೆ ವಿತರಿಸಲಾಗುತ್ತಿದೆ ಎಂದರು.
ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರದ 5 ಗ್ಯಾರಂಟಿ ಯೋಜನೆಗಳನ್ನು ಮನೆಮನೆಗೆ ತಲುಪಿಸಲಾಗಿದೆ. ಇಂದು ನಮ್ಮ ಕ್ಷೇತ್ರದಲ್ಲಿ ಲಕ್ಷಾಂತರ ಫಲಾನುಭವಿಗಳು ಇದ್ದಾರೆ ಎಂದರು.
ಸಂಕ್ರಾಂತಿ ಹಬ್ಬದ ಕಿಚ್ಚು ಹಾಯಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಬ್ಬನ್ನು ರೈತರಿಂದ ನೇರವಾಗಿ ಖರೀದಿ ಮಾಡಿ 10000 ಜನರಿಗೆ ವಿತರಿಸಲಾಗುತ್ತಿದೆ. ಸಂಕ್ರಾಂತಿ ಹಬ್ಬ ಎಲ್ಲರ ಬಾಳಿನಲ್ಲಿ ಬೆಳಕು ಮೂಡಲಿ, ನಂಬಿಕೆ, ಪ್ರೀತಿ, ವಿಶ್ವಾಸದಿಂದ ಎಲ್ಲರು ಬಾಳೋಣ ಎಂದು ಕರೆನೀಡಿದರು.
ಎಲ್.ಸಿ.ಹೆಚ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಸಹಕಾರ ನೀಡಿದರು, ಸಂಕ್ರಾಂತಿ ಹಬ್ಬದ ಅಂಗವಾಗಿ ಮಹಿಳೆಯರು ಬೃಹತ್ ರಂಗೋಲಿ ಬಿಡಿಸಿ ಸಂಭ್ರಮಾಚರಿಸಿದರು.







