ಜಕ್ಕೂರು ಕ್ರೀಡಾಂಗಣದಲ್ಲಿ ಸುಗ್ಗಿ- ಹುಗ್ಗಿ -2024 ಕಾರ್ಯಕ್ರಮ

2 years ago

ಬೆಂಗಳೂರು: ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಚಿವ ಕೃಷ್ಣ ಬೈರೇಗೌಡ ಅವರು ಜಕ್ಕೂರು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸುಗ್ಗಿ- ಹುಗ್ಗಿ -2024 ಕಾರ್ಯಕ್ರಮದಲ್ಲಿ ಸಾವಿರಾರು ಜನ ಭಾಗವಹಿಸಿದರು. ಜನಪದ ನೃತ್ಯ ಕಾರ್ಯಕ್ರಮವನ್ನು ಮೀನಾಕ್ಷಿ ಕೃಷ್ಣ ಬೈರೇಗೌಡ ಗಾಳಿಪಟ ಹಾರಿಸುವ ಮೂಲಕ ಚಾಲನೆ‌‌ ನೀಡಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಉತ್ತರ ಭಾಗದ ಹಲವು ಶಾಲೆಗಳ ಹಾಗೂ ನೃತ್ಯಶಾಲೆಗಳ ವಿದ್ಯಾರ್ಥಿಗಳು ವೀರಗಾಸೆ ಸೇರಿದಂತೆ ವಿವಿಧ ಜಾನಪದ ನೃತ್ಯಗಳನ್ನು ಪ್ರದರ್ಶಿಸಿದ್ದು ವಿಶೇಷವಾಗಿತ್ತು.

ಜನಪದ ನೃತ್ಯ ಮಾತ್ರವಲ್ಲದೆ ಕ್ರೀಡಾಂಗಣದಲ್ಲಿ ಹಳ್ಳಿ ಜೀವನ ಶೈಲಿಯ ಭಾಗವಾದ ವಿವಿಧ ಆಹಾರ ತಿನಿಸುಗಳ ಮಳಿಗೆಗಳನ್ನೂ ತೆರೆಯಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಜನ ಸಂಪೂರ್ಣ ಹಳ್ಳಿ ಜೀವನದ ಅನುಭವ ಪಡೆದರು.

ಜನವರಿ 14ರ ಭಾನುವಾರ ಸಹ ಬೆಳಗ್ಗೆಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಸಂಜೆ ಖ್ಯಾತ ಸಂಗೀತಕಾರ ರಘು ದೀಕ್ಷಿತ್ ಅವರ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Leave a Reply