ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಕಾಣಿಸಿಕೊಂಡಿರುವ ಬಣ ಬಡಿದಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಮಾಜಿ ಸಚಿವ ಸುನಿಲ್ ಕುಮಾರ್ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಪಕ್ಷದ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕಗೊಂಡ ನಂತರ ಯುವಕರ ತಂಡವನ್ನು ಕಟ್ಟಿದ್ದರು. ಇದರಲ್ಲಿ ಮಾಜಿ ಸಚಿವ ಸುನಿಲ್ ಕುಮಾರ್ ಅವರಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿತ್ತು. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಅವರಿಗೆ ಈ ಹುದ್ದೆ ನೀಡಲಾಗಿತ್ತು.
ಮೊದಲಿಗೆ ಪಕ್ಷದ ಒಂದೆರಡು ಸಭೆಗಳಲ್ಲಿ ಪಾಲ್ಗೊಂಡಿದ್ದ ಅವರು, ಆನಂತರದಲ್ಲಿ ಯಾವುದೇ ಸಭೆಗಳಲ್ಲಿ ಪಾಲ್ಗೊಂಡಿರಲಿಲ್ಲ. ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರೊಂದಿಗೆ ಅಂತರ ಕಾಯ್ದುಕೊಂಡು ಬಂದಿದ್ದರು. ಇದೀಗ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯುತ್ತದೆ ಎಂದು ಘೋಷಿಸಿರುವಾಗಲೇ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತಮ್ಮನ್ನು ಬಿಡುಗಡೆ ಮಾಡುವಂತೆ ಕೋರಿಕೆ ಸಲ್ಲಿಸಿರುವುದು ಕುತೂಹಲ ಕೆರಳಿಸಿದೆ.
ಮೂಲತಃ ಸಂಘ ಪರಿವಾರದ ಜೊತೆ ಗುರುತಿಸಿಕೊಂಡಿರುವ ಅವರು, ಯಾವುದೇ ಭಿನ್ನಮತೀಯ ಚಟುವಟಿಕೆಗಳಲ್ಲಿ ಕಾಣಿಸಿಕೊಳ್ಳದೆ ಸಮತೋಲನದ ಅಂತರ ಕಾಪಾಡಿಕೊಂಡೇ ಬಂದಿದ್ದರು. ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸುನೀಲ್ ಕುಮಾರ್ ಅವರನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡುವ ಮೂಲಕ ಮಹತ್ವದ ಹುದ್ದೆಯನ್ನೇ ನೀಡಲಾಗಿತ್ತು.




