ವೀರೇಂದ್ರ ಹೆಗ್ಗಡೆ ಬೆಂಬಲಿಸಿ ಬಿಜೆಪಿ ಧರ್ಮ ಯಾತ್ರೆ

8 months ago

ಬೆಂಗಳೂರು: ಅಸಹಜ ಸಾವುಗಳ ಆರೋಪದ ಪ್ರಕರಣದ ಹೆಸರಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯಕ್ಕೆ ಧಕ್ಕೆ ತರುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ ಈ ಬಗ್ಗೆ ರಾಷ್ಟ್ರೀಯ ತನಿಖಾ ದಳ(ಎನ್ ಐಎ)ದ ತನಿಖೆ ನಡೆಸಲು ಆಗ್ರಹಿಸಿದೆ.

ಧರ್ಮಸ್ಥಳದೊಂದಿಗೆ ನಾವಿದ್ದೇವೆ ಎಂದು ಬೃಹತ್ ಧರ್ಮ ಯಾತ್ರೆ ನಡೆಸಿದ ಬಿಜೆಪಿ ನಾಯಕರು ರಾಜ್ಯ ಸರ್ಕಾರ ಮತ್ತು ತಲೆ ಬುರುಡೆ ಖ್ಯಾತಿಯ ಹೋರಾಟಗಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಧಾನಮಂಡಲದ ಉಭಯ ಸದನಗಳ ಪ್ರತಿಪಕ್ಷ ನಾಯಕರಾದ ಆರ್ ಅಶೋಕ್, ಛಲವಾದಿ ನಾರಾಯಣಸ್ವಾಮಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸೇರಿದಂತೆ ಹಲವಾರು ನಾಯಕರು ಬೆಳಗ್ಗೆ ಧರ್ಮಸ್ಥಳ ಮಂಜುನಾಥೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು ಬಳಿಕ ಧರ್ಮಾಧಿಕಾರಿ, ವೀರೇಂದ್ರ ಹೆಗಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಇದಾದ ನಂತರ ಮಂಜುನಾಥಸ್ವಾಮಿ ಸನ್ನಿಧಿಗೆ ಹೊಂದಿಕೊಂಡಿರುವ ಮೈದಾನದಲ್ಲಿ ಧರ್ಮ ಯಾತ್ರೆ ನಡೆಸಿದರು. ಇದಕ್ಕೆ  ನಿರೀಕ್ಷೆಗೂ ಮೀರಿದ ಸ್ಪಂದನೆ ಹಿಂದೂ ಕಾರ್ಯಕರ್ತರಿಂದ ವ್ಯಕ್ತವಾಯಿತು.

ಮಂಗಳೂರು, ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಬೃಹತ್‌ ಸಂಖ್ಯೆಯ ಸಾವಿರಾರು ಕಾರ್ಯಕರ್ತರು ಧರ್ಮಸ್ಥಳದ ಪರವಾಗಿ ನಾವಿದ್ದೇವೆ ಎಂಬ ಸಂದೇಶವನ್ನು ರವಾನಿಸಿದರು.

Leave a Reply