ಬೆಂಗಳೂರು: ಅತ್ಯಾಚಾರ, ಹನಿಟ್ರ್ಯಾಪ್, ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಹಾಗೂ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ ತೀವ್ರ ಹಿನ್ನಡೆ ಉಂಟಾಗಿದೆ. ಜಾಮೀನು ಕೋರಿ ಇವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಕಳೆದ ಅಕ್ಟೋಬರ್ 21ರಂದು ಪ್ರಜ್ವಲ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಮೇಲ್ಮನವಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೇಲಾ ಎಂ. ತ್ರಿವೇದಿ ಹಾಗೂ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠದ ಮುಂದೆ ಪ್ರಜ್ವಲ್ ಪರ ವಾದ ಮಂಡಿಸಿದ ಮುಕುಲ್ ರೋಹಟಗಿ ಅವರು, ಪ್ರಕರಣ ಸಂಬಂಧ ಈಗಾಗಲೇ ಆರೋಪಪಟ್ಟಿ ಸಲ್ಲಿಕೆಯಾಗಿದೆ. ಪ್ರಜ್ವಲ್ ವಿರುದ್ಧ ಸಲ್ಲಿಕೆಯಾಗಿರುವ ಆರಂಭಿಕ ದೂರಿನಲ್ಲಿ ಐಪಿಸಿಯ ಸೆಕ್ಷನ್ 376ರ ಉಲ್ಲೇಖ ಇಲ್ಲ ಎಂದು ಕೋರ್ಟ್ ಮುಂದೆ ವಾದ ಮಂಡಿಸಿದರು.
ವಾದ ಆಲಿಸಿದ ಬಳಿಕ ಸುಪ್ರೀಂ ಕೋರ್ಟ್ ಪೀಠ, ಕರ್ನಾಟಕ ಹೈಕೋರ್ಟ್ ಜಾಮೀನು ನಿರಾಕರಿಸಿ ಅಕ್ಟೋಬರ್ 21ರಂದು ನೀಡಿರುವ ಆದೇಶದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದಿದೆ.ಪ್ರಜ್ವಲ್ ಅತ್ಯಂತ ಪ್ರಭಾವಿ ಎಂಬುದನ್ನು ಪರಿಗಣಿಸಿ ಅರ್ಜಿಯನ್ನು ವಜಾಗೊಳಿಸಿತು
ಪ್ರಜ್ಚಲ್, ತಮ್ಮ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ಸೈಬರ್ ಸೆಲ್‌ನಲ್ಲಿ ದಾಖಲಾಗಿದ್ದ 2 ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮೂರೂ ಅರ್ಜಿಗಳನ್ನು ವಜಾಗೊಳಿಸಿತ್ತು.




