ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಕರ್ನಾಟಕ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
- ನ್ಯಾಯಾಲಯದ ಆದೇಶವಿದ್ದರೂ 8 ವರ್ಷಗಳಿಂದ ಉದ್ಯೋಗ ವಂಚನೆ
- AHO, ADH ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ದಿನಾಂಕಗಳನ್ನು ಮುಂದೂಡಿ: ಆರ್ ಅಶೋಕ್
- ಕೃಷ್ಣ ಬೈರೇಗೌಡ ಅವರಿಗೆ ಪ್ರಕಾಶ್ ಕೋನಾಪುರ ಬರೆದ ಪತ್ರ
- ಆಹಾರ, ಔಷಧ ಕ್ಷೇತ್ರದ ಯಾವುದೇ ಅಕ್ರಮ ಜಾಲವನ್ನು ಸರ್ಕಾರ ಸಹಿಸದು: ಯು.ಟಿ.ಖಾದರ್
- ಜಯಚಾಮರಾಜೇಂದ್ರ ಒಡೆಯರ್ ಕೃತಿಗಳಿಗೆ ಭರತನಾಟ್ಯ ಪ್ರಯೋಗ
ಜೊತೆಗೆ ಮುಂದಿನ ಆದೇಶದವರೆಗೆ 8, 9 ಮತ್ತು 10 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ಆದೇಶ ಹೊರಡಿಸಿದೆ.
ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಮಾರ್ಚ್ 22ರಂದು ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳ ಸಂಸ್ಥೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ವಿದ್ಯಾರ್ಥಿಗಳಿಗೆ ಯಾಕೆ ಕಿರುಕುಳ ನೀಡುತ್ತಿದ್ದೀರಿ? ನೀವು ಈ ರೀತಿ ವರ್ತಿಸಬಾರದು. ನಿಮಗೆ ನಿಜವಾಗಿಯೂ ವಿದ್ಯಾರ್ಥಿಗಳ ಹಿತದ ಬಗ್ಗೆ ಕಾಳಜಿಯಿದ್ದರೆ, ದಯವಿಟ್ಟು ಒಳ್ಳೆಯ ಶಾಲೆಗಳನ್ನು ತೆರೆಯಿರಿ. ವಿದ್ಯಾರ್ಥಿಗಳ ಕತ್ತು ಹಿಸುಕುವ ಕೆಲಸ ಮಾಡಬೇಡಿ. ಪ್ರೌಢಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ನಾಟಕ ಸರ್ಕಾರ ಅನುಸರಿಸುತ್ತಿರುವ ನೀತಿಯನ್ನು ದೇಶದ ಬೇರೆ ಯಾವುದೇ ರಾಜ್ಯಗಳು ಅನುಸರಿಸುತ್ತಿಲ್ಲ ಎಂದು ಆದೇಶಿಸಿದೆ.




