ಬೆಂಗಳೂರು: ವಿಧಾನಸಭೆ ಚುನಾವಣೆಯ ಮತ ಎಣಿಕೆಯಲ್ಲಿ ಆಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಾಲೂರು ಕ್ಷೇತ್ರದ ಶಾಸಕ ನಂಜೇಗೌಡ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
2023ರ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದ ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಲ್ಲಿಕೆಯಾದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್ ಸೆಪ್ಟೆಂಬರ್ 16 ರಂದು ಶಾಸಕ ಕೆ.ವೈ. ನಂಜೇಗೌಡ ಅವರ ಆಯ್ಕೆಯನ್ನು ರದ್ದುಪಡಿಸಿತ್ತು.
ಅಲ್ಲದೆ ಈ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಂಜೇಗೌಡ ಅವರಿಗೆ ಒಂದು ತಿಂಗಳ ಅವಕಾಶ ನೀಡಿತ್ತು. ಅದರಂತೆ ನಂಜೇಗೌಡ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಬಾಗ್ಚಿ ಅವರಿದ್ದ ವಿಭಾಗಿಯ ಪೀಠ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.
ಅಲ್ಲದೆ ಮರು ಮತ ಎಣಿಕೆಗೆ ಸೂಚನೆ ನೀಡಿರುವ ಸುಪ್ರೀಂ ಕೋರ್ಟ್, ಫಲಿತಾಂಶವನ್ನು ಯಾವುದೇ ಕಾರಣಕ್ಕೂ ಪ್ರಕಟ ಮಾಡದೇ ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ಸಲ್ಲಿಸುವಂತೆ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಸೂಚನೆ ನೀಡಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ನಂಜೇಗೌಡ ಅವರ ವಕೀಲ ಮಹೇಂದ್ರ ಕುಮಾರ್ ಕರ್ನಾಟಕ ಹೈಕೋರ್ಟ್ ನೀಡಿದ ಅಸಿಂಧು ಎಂಬ ಆದೇಶಕ್ಕೆ ಪ್ರಕರಣದ ಅಂತಿಮ ತೀರ್ಪಿನವರೆಗೂ ತಡೆ ನೀಡಲಾಗಿದೆ. ಮರು ಎಣಿಕೆಯನ್ನು ಗೌಪ್ಯವಾಗಿಡಲು ಸೂಚಿಸಿದ್ದು, ಎಷ್ಟು ದಿನ ಕಾಲಾವಕಾಶ ಎಂಬ ಬಗ್ಗೆ ಸಂಪೂರ್ಣ ಆದೇಶ ಸಿಕ್ಕ ಬಳಿಕ ಖಚಿತವಾಗಲಿದೆ ಎಂದರು.
ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಮಾತನಾಡಿದ ಶಾಸಕ ಕೆ ವೈ ನಂಜೇಗೌಡ, ಅಸಿಂಧು ಎಂಬ ಆದೇಶವನ್ನು ತಡೆ ಹಿಡಿದಿದ್ದು, ನನಗೆ ಸಂತೋಷವಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯ ಸಿಕ್ಕಿದೆ. ಮರು ಎಣಿಕೆ ವಿಚಾರವನ್ನು ನಾನು ಸ್ವಾಗತಿಸುತ್ತೇನೆ. ನನ್ನ ಅಭಿಮಾನಿಗಳಿಗೆ, ಕ್ಷೇತ್ರದ ಜನತೆಗೂ ಸಮಾಧಾನವಾಗಿದೆ ಎಂದರು.




