ಬೆಂಗಳೂರು: ಗುಣಪಡಿಸಲಾಗದ ಮಾರಣಾಂತಿಕ ರೋಗಗಳಿಂದ ನರಳುತ್ತಿರುವ ರೋಗಿಯು ಘನತೆಯಿಂದ ಸಾಯುವ ಹಕ್ಕು ನೀಡಿರುವ ಸುಪ್ರೀಂ ಕೋರ್ಟ್ ಆದೇಶವನ್ನು ರಾಜ್ಯದಲ್ಲಿ ಜಾರಿಗೆ ತರಲಾಗುತ್ತಿದೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಈ ಕುರಿತ ಸುತ್ತೋಲೆಯನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕರ್ನಾಟಕ ಪ್ರಗತಿಪರ ರಾಜ್ಯವಾಗಿದ್ದು ನ್ಯಾಯಾಲಯಗಳ ಆದೇಶಗಳಿಗೆ ಗೌರವ ನೀಡಿ ಅದನ್ನು ಚಾಚು ತಪ್ಪದೇ ಪಾಲಿಸುತ್ತಿದೆ ಎಂದಿದ್ದಾರೆ.
ಮಾರಣಾಂತಿಕ ಖಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು ಘನತೆಯಿಂದ ಸಾವಿನ ಹಕ್ಕನ್ನು ಚಲಾಯಿಸಲು ಅವಕಾಶ ನೀಡುತ್ತದೆ. ಇದಕ್ಕಾಗಿ ಮರಣ ಇಚ್ಛೆಯ ಉಯಿಲು ಅಥವಾ ಲಿವಿಂಗ್ ವಿಲ್ ಅನ್ನು ಸಹ ಹೊರತಂದಿದೆ. ಇದರಲ್ಲಿ ರೋಗಿ ಭವಿಷ್ಯದಲ್ಲಿ ತಮ್ಮ ವೈದ್ಯಕೀಯ ಚಿಕಿತ್ಸೆಯ ಬಗ್ಗೆ ತಮ್ಮ ಇಚ್ಛೆಯನ್ನು ದಾಖಲಿಸಬಹುದು ಎಂದಿದ್ದಾರೆ.




