ಬೆಂಗಳೂರು: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ ವಿರುದ್ಧದ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಈಗಾಗಲೇ ಬಂಧನವಾಗಿರುವ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಹಿತೇಂದ್ರ ಆದೇಶ ಹೊರಡಿಸಿದ್ದಾರೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಸೂರಜ್ ರೇವಣ್ಣ ವಿರುದ್ಧದ ಪ್ರಕರಣವನ್ನು ಸಿಐಡಿಗೆ ವಹಿಸಿರುವ ಸಂಬಂಧ ಎಡಿಜಿಪಿ ಹಿತೇಂದ್ರ ಅವರು ಹಾಸನ ಎಸ್ಪಿ, ಸಿಐಡಿ ಡಿಜಿಪಿಗೆ ಪತ್ರ ಬರೆದಿದ್ದಾರೆ. ಖುದ್ದು ಸಿಐಡಿ ಕಚೇರಿಗೆ ತೆರಳಿ ಕೇಸ್ ಫೈಲ್ ನೀಡುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ತನಿಖೆಗೆ ತಯಾರಿ ಮಾಡಿಕೊಳ್ಳಲು ಸಿಐಡಿ ಅಧಿಕಾರಿಗಳಿಗೆ ಸಹ ಸೂಚನೆ ನೀಡಿದ್ದಾರೆ.
ಅಸಹಜ ಲೈಂಗಿಕ ದೌರ್ಜನ್ಯ ಸಂಬಂಧ ಸೆನ್ ಠಾಣೆ ಪೊಲೀಸರು ಬಂಧಿಸಿರುವ ಸೂರಜ್ ವಿರುದ್ಧ ಸಂತ್ರಸ್ತ ನೀಡಿದ್ದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ) ಹಾಗೂ 506 (ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪಕ್ಷದ ನಿರ್ಧಾರವೇನು?: ಈ ನಡುವೆ ವಿದ್ಯಮಾನದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಈ ಪ್ರಕರಣದ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದರು.
ಪ್ರಕರಣದ ಬಗ್ಗೆ ನನಗೆ ಮಾಹಿತಿ ಇಲ್ಲ. ಸೂರಜ್ ಅವರನ್ನು ಬಂಧಿಸಿರುವ ವಿಷಯವೂ ನಿಮ್ಮಿಂದಲೇ (ಮಾಧ್ಯಮದಿಂದ) ತಿಳಿಯಿತು. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿಚಾರದಲ್ಲೂ ನಮ್ಮ (ಪಕ್ಷದ) ಹಸ್ತಕ್ಷೇಪ ಇರಲಿಲ್ಲ. ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ ಎಂದರು.
ನಾವು ತಪ್ಪು ಮಾಡಿದವರ ಪರ ನಿಲ್ಲುವುದಿಲ್ಲ. ನನ್ನ ಮಗನೇ ಇರಲಿ, ನನ್ನ ಸಂಬಂಧಿಗಳೇ ಇರಲಿ, ಯಾರೇ ತಪ್ಪು ಮಾಡಿದರೂ ತಪ್ಪೇ. ಜಾತ್ಯತೀತ ಜನತದಾಳ ಪಕ್ಷ ತಪ್ಪು ಮಾಡಿದವರ ಪರವಾಗಿ ಎಂದಿಗೂ ನಿಲ್ಲುವುದಿಲ್ಲ ಎಂದರು.



