ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತಾರೆಂದು ನಾವು ಹೇಳುತ್ತಿಲ್ಲ, ಕಾಂಗ್ರೆಸ್ ಪಕ್ಷದವರೇ ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಬದಲಾವಣೆಯಾಗುವುದು ನೂರಕ್ಕೆ ನೂರರಷ್ಟು ಖಚಿತ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನ ಹಲವು ನಾಯಕರು ಮುಖ್ಯಮಂತ್ರಿ ಕುರ್ಚಿ ಮೇಲೆ ಸಾಲು ಸಾಲು ಟವಲ್ ಹಾಕಿರುವುದನ್ನು ನೋಡಿದರೆ ಸಿದ್ದರಾಮಯ್ಯ ಬದಲಾವಣೆಯಾಗುತ್ತಾರೆ ಎನ್ನುವುದು ಖಚಿತವಾಗುತ್ತದೆ. ಎಂ.ಬಿ.ಪಾಟೀಲ್, ಜಾರಕಿಹೊಳಿ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್, ಪರಮೇಶ್ವರ್ ಪ್ರಯತ್ನ ಮಾಡುತ್ತಿರುವ ವಿಚಾರ ಗೊತ್ತಿದೆ ಎಂದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಟಿ ರವಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿಯ ಮೇಲೆ ತೂಗು ಕತ್ತಿ ತೂಗುತ್ತಿದ್ದು ದೀಪಾವಳಿ ವೇಳೆಗೆ ಈ ಸರ್ಕಾರ ಡಮಾರ್ ಎನ್ನಲಿದೆ ಎಂದರು.
ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚಟುವಟಿಕೆಗಳು ಬಿರುಸುಗೊಂಡಿವೆ. ಮುಖ್ಯಮಂತ್ರಿ ರಕ್ಷಣೆಗೆ ಬಂಡೆಯಂತೆ ನಿಲ್ಲುತ್ತೇನೆ ಎಂದು ಹೇಳಿದವರೇ ಬಾಂಬ್ ಇಡುತ್ತಿದ್ದಾರೆ ಎಂದರು.
ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಅಕ್ರಮ ನಡೆದಿರುವುದು ನಿಜ ಸಿಎಂ ಸಿದ್ದರಾಮಯ್ಯ ಇದಕ್ಕಾಗಿ ಶಿಕ್ಷೆ ಅನುಭವಿಸಲಿದ್ದಾರೆ. ಇದನ್ನು ಅರಿತ ಹಲವು ಕಾಂಗ್ರೆಸ್ ನಾಯಕರು ಸಿಎಂ ಹುದ್ದೆಗೆ ಟವಲ್ ಹಾಕಿಕೊಂಡು ಕಾಯುತ್ತಿದ್ದಾರೆ. ಆದರೆ ಇದಕ್ಕೆ ಅವಕಾಶ ಸಿಗುವುದಿಲ್ಲ. ಸರ್ಕಾರ ಪತನ ಹೊಂದುವುದು ನಿಶ್ಚಿತ ಎಂದು ಹೇಳಿದರು.




