ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸ್ ಜಾರಿ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಬುಧವಾರ ಸುರಿದ ಭಾರಿ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು, ಏಳು ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಇಂದು ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರುಗಳ ಸಭೆಯಲ್ಲಿ ಅವರು ಮಾತನಾಡಿದರು.
ಗೋಡೆಗೆ ಹಾನಿಯಾಗುವಂತೆ ಮಣ್ಣು ಸುರಿದದ್ದನ್ನು ಆಸ್ಪತ್ರೆ ಮುಖ್ಯಸ್ಥರು ಏಕೆ ಗಮನಿಸಿಲ್ಲ. ಇದು ಮೇಲ್ನೋಟಕ್ಕೆ ಕರ್ತವ್ಯಲೋಪದಂತೆ ಕಾಣುತ್ತಿದ್ದು, ಈ ಸಂಬಂಧ ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್ ನೀಡಬೇಕು. ಬೆಂಗಳೂರಿನಲ್ಲಿ ಗುಂಡಿಗಳನ್ನು ಮುಚ್ಚಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ನಿನ್ನೆ ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ಸಾಕಷ್ಟು ಹಾನಿಯಾಗಿದ್ದು, 250ಕ್ಕೂ ಹೆಚ್ಚು ಮರಗಳು ಬಿದ್ದಿವೆ. ಏಳು ಜನ ಸಾವನ್ನಪ್ಪಿದ್ದಾರೆ. ಈಗಾಗಲೇ ಸತ್ತವರ ಕುಟುಂಬದವರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದೇನೆ ಎಂದರು.
ಮುಂಗಾರು ಮಳೆ ಪ್ರಾರಂಭವಾಗುವ ಮೊದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಬೆಂಗಳೂರಿನ ಐದೂ ವಲಯಗಳ ಆಯುಕ್ತರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಒಣಗಿರುವ ಅಪಾಯಕಾರಿ ಮರಗಳ ರೆಂಬೆಗಳನ್ನು ಈಗಲೇ ಕತ್ತರಿಸಬೇಕು ಎದು ಸೂಚನೆ ನೀಡಿದರು.
ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು ರಾಜಕಾಲುವೆಗಳಲ್ಲಿ ಹೂಳು ತೆಗೆದು, ಪ್ರವಾಹ ಉಂಟಾಗದಂತೆ ಕ್ರಮ ತೆಗೆದುಕೊಳ್ಳಬೇಕು. ಮಳೆಯಿಂದ ರಸ್ತೆಯಲ್ಲಿ ಬಿದ್ದಿರುವ ಕಸ, ರೆಂಬೆಗಳನ್ನು ಕೂಡಲೇ ತೆರವು ಮಾಡಬೇಕು. ಅಂಡರ್ ಪಾಸ್ ಗಳಲ್ಲಿ ಮಳೆ ನೀರು ನಿಲ್ಲದಂತೆ ಹಾಗೂ ನೀರು ನಿಂತ ಅಂಡರ್ ಪಾಸ್‌ಗಳನ್ನು ಜನ ಬಳಸದಂತೆ ಕೂಡಲೇ ಬ್ಯಾರಿಕೇಡ್ ಹಾಕಬೇಕು ಎಂದರು.




