ಬೀದರ್: ಕಳೆದ ಒಂದೂವರೆ ವರ್ಷದಿಂದ ಸ್ಥಗಿತಗೊಂಡಿರುವ ಬೀದರ್ – ಬೆಂಗಳೂರು ನಾಗರಿಕ ವಿಮಾನಯಾನ ಸೇವೆ ಇದೇ 15ರಿಂದ ಪುನಾರಂಭಗೊಳ್ಳಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಏ. 16ರಂದು ವಿಮಾನಯಾನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಮುಖ್ಯಮಂತ್ರಿಗಳು ಬೀದರ್ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷ ಜಿಲ್ಲೆಯಲ್ಲಿ 2025 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಶಿಲಾನ್ಯಾಸ ಮತ್ತು ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದರು.
ಬಸವಕಲ್ಯಾಣದಲ್ಲಿ ಆಧುನಿಕ ಅನುಭವ ಮಂಟಪ ಕಾಮಗಾರಿ ಪ್ರಗತಿಯಲ್ಲಿದ್ದು, ಇದು ಪೂರ್ಣಗೊಂಡ ಬಳಿಕ ಬೀದರ್ ಜಿಲ್ಲೆ ಧಾರ್ಮಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕತೆಯ ತಾಣವಾಗಿ ಪರಿವರ್ತನೆಯಾಗಲಿದೆ. ಇದಕ್ಕೆ ಹೊನ್ನಿಕೇರಿಯ ಪರಿಸರ ಪ್ರವಾಸೋದ್ಯಮವೂ ಒತ್ತು ನೀಡಲಿದ್ದು, ನಾಗರಿಕ ವಿಮಾನಯಾನ ಸೇವೆಗೆ ಬೇಡಿಕೆ ಬರಲಿದೆ ಎಂದರು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಅತಿರೇಕದ ಮಟ್ಟ ತಲುಪಿತ್ತು. ಬಹುಶಃ ಬಸವರಾಜ ರಾಯರೆಡ್ಡಿ ಅವರು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯ ಭ್ರಷ್ಟಾಚಾರದಲ್ಲಿ ನಂ.1 ಆಗಿತ್ತು ಎಂದು ಹೇಳಲು ಹೋಗಿ ಬಾಯಿತಪ್ಪಿ ಈ ಹೇಳಿಕೆ ನೀಡಿರಬೇಕು ಎಂದರು.
ಗಣಿ ಗುತ್ತಿಗೆ ನವೀಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಆರೋಪವನ್ನು ಬಿಜೆಪಿ ಮಾಡುತ್ತಿದೆ. ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಮಿಗಿಲಾಗಿ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಿರುವ ರಾಜ್ಯಪಾಲರಿರುವ, ರಾಜಭವನ ನಿಷ್ಪಕ್ಷಪಾತವಾದ ಕೇಂದ್ರವಾಗಿರಬೇಕು. ಅದು ಬಿಜೆಪಿ ಕಚೇರಿ ಆಗಬಾರದು ಎಂದರು.




