ಬೆಂಗಳೂರು: ಸಾಫ್ಟ್‌ವೇರ್ ಎಂಜಿನಿಯರ್ ರೊಬ್ಬರು ಕಾರಿನಲ್ಲೇ ಶಂಕಾಸ್ಪದವಾಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುರಬರಹಳ್ಳಿ ಜಂಕ್ಷನ್ ಬಳಿ ನಡೆದಿದೆ. ಮಹಾಲಕ್ಷ್ಮೀ ಲೇಔಟ್ನ ವಿಜಯ್ಕುಮಾರ್(51) ಮೃತ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದಾರೆ.
ಕೆಲವು ದಿನಗಳಿಂದ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಆದರೆ ಕಾರಿಗೆ ಹೊದಿಕೆ ಮುಚ್ಚಿದ್ದ ಕಾರಣ ಇದು ಆತ್ಮಹತ್ಯೆಯೋ, ಕೊಲೆಯೋ ಎಂಬ ಶಂಕೆ ವ್ಯಕ್ತವಾಗಿದೆ.
ವಿಜಯ್ ಕುಮಾರ್ ಮುಖಕ್ಕೆ ಪ್ಲಾಸ್ಟಿಕ್ ಕವರ್ ಕಟ್ಟಿತ್ತು, ಜತೆಗೆ ನೈಟ್ರೋಜನ್ ಆಕ್ಸಿಜನ್ ಪೈಪ್ ಅನ್ನು ಮೂಗಿಗೆ ಬಿಟ್ಟಿರುವ ಸ್ಥಿತಿಯಲ್ಲಿದೆ. ಅನಾರೋಗ್ಯದಿಂದ ಬೇಸತ್ತು ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಹೃದಯ ಸಂಬಂಧಿ ಸಮಸ್ಯೆಗೆ ವಿಜಯ್ ಕುಮಾರ್ ಚಿಕಿತ್ಸೆ ಪಡೆಯುತ್ತಿದ್ದರು. ಮನೆಯಲ್ಲಿ ಪತ್ನಿ ಜತೆ ಹಲವು ಬಾರಿ ಆತ್ಮಹತ್ಯೆ ಮಾಡಿಕೊಳ್ಳುವ ವಿಷಯವನ್ನು ಪ್ರಸ್ತಾಪಿಸಿದ್ದರು.
ಕಾರನ್ನು ವಾಷ್ ಮಾಡಿಸುವ ನೆಪದಲ್ಲಿ ಮನೆಯಿಂದ ಹೊರಗೆ ಬಂದಿದ್ದ ವಿಜಯ್ ಕುಮಾರ್, ಪಾನಿಪುರಿ ಅಂಗಡಿಗಿಂತ ಸ್ವಲ್ಪ ದೂರದಲ್ಲಿ ನಿಲ್ಲಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸುಸ್ತಾಗಿದೆ ನಿದ್ರೆ ಮಾಡಬೇಕೆಂದು ಸಾರ್ವಜನಿಕರ ಬಳಿ ಸಹಾಯ ಪಡೆದು ಕಾರಿಗೆ ಹೊದಿಕೆ ಹಾಕಿಸಿಕೊಂಡಿದ್ದರು. ಬಳಿಕ ಕಾರಿನಲ್ಲಿದ್ದ ನೈಟ್ರೋಜನ್ ಗ್ಯಾಸ್ ಸಿಲಿಂಡರ್ ಅನ್ನು ಆನ್ ಮಾಡಿದ್ದರು.
ಪ್ಲಾಸ್ಟಿಕ್ ಕವರ್ ಮುಖಕ್ಕೆ ಸುತ್ತಿಕೊಂಡು ಪೈಪ್ ಮೂಲಕ ಗಾಳಿ ಪಡೆದು ಸಾವನ್ನಪ್ಪಿದ್ದಾರೆ. ಸಾರ್ವಜನಿಕರ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕಳುಹಿಸಲಾಗಿತ್ತು. ಅಷ್ಟೊತ್ತಿಗಾಗಲೇ ಟೆಕ್ಕಿ ಮೃತಪಟ್ಟಿದ್ದರು. ಬಳಿಕ ಕುಟುಂಬಕ್ಕೆ ಪೊಲೀಸರು ಮಾಹಿತಿ ನೀಡಿದ್ದು ಪ್ರಕರಣ ದಾಖಲಿಸಿರುವ ಉತ್ತರ ವಿಭಾಗದ ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.




