ಬೆಂಗಳೂರು: ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರನ್ನು ಕೊಲೆ ಮಾಡಿದ ಆರೋಪದಲ್ಲಿ ಸಿಲುಕಿರುವ ಸ್ಯಾಂಡಲ್ ವುಡ್ ನಟ ಛಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಸ್ವಿಟ್ಜರ್ ಲ್ಯಾಂಡ್ ವೀಸಾ ನಿರಾಕರಿಸಲಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಇವರ ಅಭಿನಯದ ಭಾರೀ ನಿರೀಕ್ಷೆ ಮೂಡಿಸಿದ ‘ಡೆವಿಲ್’ ಸಿನಿಮಾ ಶೂಟಿಂಗ್‌ಗಾಗಿ ದರ್ಶನ್ ಸ್ವಿಟ್ಜರ್‌ಲ್ಯಾಂಡ್‌ಗೆ ತೆರಳಲು ಯೋಜನೆ ಹಾಕಿದ್ದರು. ಆದರೆ ದರ್ಶನ್ ಅವರ, ಕ್ರಿಮಿನಲ್ ಹಿನ್ನೆಲೆಯ ಕಾರಣದಿಂದಾಗಿ ಯುರೋಪ್‌ಗೆ ಪ್ರವೇಶ ನಿಷೇಧಿಸಲಾಗಿದೆ. ಇದರಿಂದ ಸ್ವಿಟ್ಜರ್‌ಲ್ಯಾಂಡ್ ವೀಸಾ ರದ್ದಾಗಿದೆ.
ದರ್ಶನ್ ಅವರು ಜುಲೈ 14ರಂದು ದುಬೈ ಮತ್ತು ಯುರೋಪ್‌ಗೆ ತೆರಳಲು 64ನೇ ಸಿಸಿಎಚ್ ಕೋರ್ಟ್‌ನಿಂದ ಅನುಮತಿ ಪಡೆದಿದ್ದರು. ಇದೀಗ ಸ್ವಿಟ್ಜರ್‌ಲ್ಯಾಂಡ್ ವೀಸಾ ನಿರಾಕರಣೆಯಾದ ಹಿನ್ನೆಲೆಯಲ್ಲಿ, ದರ್ಶನ್ ಥೈಲ್ಯಾಂಡ್‌ಗೆ ಶೂಟಿಂಗ್‌ಗಾಗಿ ತೆರಳಲು ಯೋಜನೆ ಹಾಕಿದ್ದಾರೆ. ಇದಕ್ಕಾಗಿ ಕೋರ್ಟ್‌ನಲ್ಲಿ ಮತ್ತೊಮ್ಮೆ ಅನುಮತಿ ಕೋರಿದ್ದಾರೆ. ಕೋರ್ಟ್ ಜುಲೈ 11 ರಿಂದ ಥೈಲ್ಯಾಂಡ್‌ಗೆ ತೆರಳಲು ಅನುಮತಿ ನೀಡಿದ್ದು, ಮುಂದಿನ ವಾರ ದರ್ಶನ್ ಥೈಲ್ಯಾಂಡ್‌ನ ಪುಕೆಟ್‌ಗೆ ತೆರಳಲಿದ್ದಾರೆ.
ಕೊಲೆ ಆರೋಪದಿಂದ ಚಿತ್ರರಂಗದಲ್ಲಿ ಭಾರೀ ಚರ್ಚೆಗೆ ಗುರಿಯಾಗಿರುವ ದರ್ಶನ್‌ಗೆ ಈ ಘಟನೆ ಮತ್ತೊಂದು ಆಘಾತವನ್ನುಂಟು ಮಾಡಿದೆ. ‘ಡೆವಿಲ್’ ಚಿತ್ರದ ಶೂಟಿಂಗ್ ಯೋಜನೆಯಲ್ಲಿ ಈ ಬದಲಾವಣೆಯಿಂದ ತಂಡಕ್ಕೆ ಹೊಸ ಸವಾಲುಗಳು ಎದುರಾಗಿವೆ.




